ತುಮಕೂರು: ತಾನು ಚುನಾವಣ ರಾಜಕೀಯಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದರು.
Advertisement
ತಿಪಟೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ 81ರ ಹರೆಯದ ಅವರು, ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ.
ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಘೋಷಿಸಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಜಿ.ಎಸ್.ಬಸವರಾಜು ಗೆಲುವು ಸಾಧಿಸಿದ್ದರು.