Advertisement
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಲಿ ಸಂಸದರಾದ ಬಿ.ಎನ್.ಬಚ್ಚೇಗೌಡ ಚುನಾವಣ ರಾಜಕಾರಣದಿಂದ ದೂರ ಉಳಿಯುವ ಮಾತುಗಳನ್ನಾಡಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ವಯಸ್ಸು 80 ದಾಟಿರುವುದು, ಪುತ್ರ ಹೊಸಕೋಟೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಕಾಂಗ್ರೆಸ್‌ನಲ್ಲಿ ಭದ್ರ ನೆಲೆ ಕಂಡುಕೊಳ್ಳುತ್ತಿರುವುದು.
Related Articles
Advertisement
ಸಂಸದ ಬಚ್ಚೇಗೌಡರ ಉತ್ತರಾಧಿಕಾರಿ ಯಾರೆಂಬ ಪ್ರಶ್ನೆಗೆ ಬಿಜೆಪಿ ವಲಯದಲ್ಲಿ ಸದ್ಯಕ್ಕೆ ಉತ್ತರ ಇಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಚ್ಚರಿ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಸೋತ ಮಾಜಿ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಲೋಕಸಭೆಗೆ ಟಿಕೆಟ್ ಕೇಳಿದ್ದಾರೆ. ಜತೆಗೆ ಇದೇ ಕ್ಷೇತ್ರಕ್ಕೆ ಒಳಪಡುವ ಯಲಹಂಕ ಶಾಸಕ ಎಸ್.ಎಸ್.ವಿಶ್ವನಾಥ್ ತಮ್ಮ ಪುತ್ರನಿಗೆ ಟಿಕೆಟ್ ಬೇಡಿಕೆ ಇಟ್ಟಿದ್ದಾರಂತೆ. ಹೊಸಕೋಟೆ ಎಂಬಿಟಿ ನಾಗರಾಜ್ ಬಿಜೆಪಿ ಟಿಕೆಟ್ ಕೇಳಿದ್ದಾರೆ ಎನ್ನುವ ಮಾಹಿತಿ ಇದೆ. ಇನ್ನೂ ಕಾಂಗ್ರೆಸ್‌ನಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತೆ 2 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ವೀರಪ್ಪ ಮೊಲಿ ಮತ್ತೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೌರಿಬಿದನೂರಲ್ಲಿ 5 ಬಾರಿ ಗೆದ್ದು 6ನೇ ಬಾರಿ ಸೋತಿರುವ ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಮಗೆ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ವಿಧಾನ ಪರಿಷತ್ತು ಸದಸ್ಯ ಎಂ.ಆರ್.ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ ಕೂಡ ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಾಗತಿ ನಾಗರಾಜಪ್ಪ