Advertisement

ಮಧ್ಯಪ್ರದೇಶ-ಮಿನಿಸಮರ: ಕಮಲ್ ನಾಥ್ ಗೆ ಮುಖಭಂಗ, ಶಿವರಾಜ್ ಸಿಂಗ್ ಸರ್ಕಾರಕ್ಕೆ ಸ್ಪಷ್ಟ ಬಹುಮತ

06:12 PM Nov 10, 2020 | Nagendra Trasi |

ಭೋಪಾಲ್; ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪೂರ್ಣಬಹುಮತದೊಂದಿಗೆ ಸುಭದ್ರವಾದಂತಾಗಿದೆ.

Advertisement

14 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಜ್ಯೋತಿರಾಧಿತ್ಯ ಸಿಂಧ್ಯಾ ಅಗ್ನಿಪರೀಕ್ಷೆಯಲ್ಲಿ ಗೆಲುವು ಸಾಧಿಸಿದಂತಾಗಿದ್ದು, ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ. ಮಾಯಾವತಿಯ ಬಿಎಸ್ಪಿ ಮೋರೆನಾ ಕ್ಷೇತ್ರದಲ್ಲಿ ಜಯ ಸಾಧಿಸಿದೆ.

ಕೋವಿಡ್ 19ರ ನಿಯಮಾವಳಿ ಅನುಸಾರ ಮತಎಣಿಕೆ ನಡೆಯುತ್ತಿದೆ. ಪೂರ್ಣ ಫಲಿತಾಂಶ ತಡವಾಗಲಿದೆ ಎಂದು ಆಯೋಗ ತಿಳಿಸಿದೆ. ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಭಾಗದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

ಚುನಾವಣೆಯಲ್ಲಿನ ಜನಾದೇಶವನ್ನು ಗೌರವಿಸುವುದಾಗಿ ಮಾಜಿ ಸಿಎಂ ಕಮಲ್ ನಾಥ್ ಪ್ರತಿಕ್ರಿಯೆ ನೀಡಿದ್ದು, ಸೋಲನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಮಧ್ಯಪ್ರದೇಶದ ಸರ್ಕಾರಕ್ಕೆ ಜನರು ಪೂರ್ಣ ಬಹುಮತ ನೀಡಿದಂತಾಗಿದೆ. ರಾಜ್ಯದ ಅಭಿವೃದ್ಧಿ ಮತ್ತು ಶ್ರೇಯಸ್ಸಿಗಾಗಿ ರಾಜ್ಯದ ಜನರು ಹೊಣೆಗಾರಿಕೆ ಹೊರಿಸಿದ್ದು, ಅದನ್ನು ಪೂರ್ಣಗೊಳಿಸುವುದಾಗಿ ಶಿವರಾಜ್ ಸಿಂಗ್ ತಿಳಿಸಿದ್ದಾರೆ. ಕಾಂಗ್ರೆಸ್ ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಎಸ್ಪಿ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.

Advertisement

ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ 107 ಶಾಸಕರ ಬೆಂಬಲ ಹೊಂದಿದ್ದು. 229 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 115 ಶಾಸಕರ ಅಗತ್ಯವಿತ್ತು. 28 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 8ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಾಗಿತ್ತು. ಕಾಂಗ್ರೆಸ್ ಸದನದಲ್ಲಿ 87 ಶಾಸಕರ ಬಲ ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next