Advertisement
ಪಟ್ಟಣದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 2.5 ಕೋಟಿ ರೂ., ವೆಚ್ಚದ ಸಭಾ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿಗೆ ಸೂಕ್ತವಾದ ತನಿಖೆಯಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು.
Related Articles
Advertisement
ಸ್ವಪಕ್ಷಿಯರೇ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ವಿರುದ್ಧವೇ ಹಣ ನೀಡಿದ್ದರೆ ಅಧಿಕಾರ ಹಿಡಿಯುತ್ತಿದ್ದೆ ಎಂದು ಆರೋಪಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ಈ ಬಗ್ಗೆ ಪಕ್ಷದಲ್ಲಿ ಹಿರಿಯರಿದ್ದಾರೆ. ಕೇಂದ್ರದ ಸಂಸದನಾಗಿ ಪ್ರತಿಕ್ರಿಯೆ ನೀಡಲಾರೆ ಎಂದ ಅವರು, ರಾಜ್ಯದಲ್ಲಿ ವಿಪಕ್ಷವಾಗಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಸರ್ಕಾರದ ವಿರುದ್ಧ ಹೋರಾಟಗಳು, ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದೆ. ಸರ್ಕಾರ ವಿರುದ್ಧ ಆರೋಪಿಸಲು ಸಮರ್ಥವಾದ ಕಾರಣ ಇಲ್ಲದೇ ಇರುವುದರಿಂದ ಚುನಾವಣೆಯ ಹೊಸ್ತಿಲಲ್ಲಿ ಸಂಘಟನೆಯ ಉಳಿವಿಗಾಗಿ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಲೇವಡಿ ಮಾಡಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಲಾಗುವುದು ಎಂದಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದಲ್ಲಿ ಅಧಿಕಾರವೆಂಬುದು ಶಾಶ್ವತವಲ್ಲ. ರಾಜಕಾರಣ ಎಂಬುದು ನಿಂತ ನೀರಲ್ಲ. ಈ ನಿಟ್ಟಿನಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಹೊಸ ಮುಖಗಳಿಗೆ ಆದ್ಯತೆ ನೀಡುವುದು ಸರಿ ಎಂದರು.
ಈ ಸಂದರ್ಭದಲ್ಲಿ ಜಡೆ ಸಂಸ್ಥಾನ ಮಠದ ಹಾಗೂ ಸೊರಬ ಮುರುಘಾಮಠದ ಶ್ರೀ. ಡಾ. ಮಹಾಂತ ಸ್ವಾಮೀಜಿ, ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಪ್ರಮುಖರಾದ ಚಿಕ್ಕಾವಲಿ ನಾಗರಾಜಗೌಡ, ನಿರಂಜನ ಕುಪ್ಪಗಡ್ಡೆ, ಗಜಾನನರಾವ್ ಉಳವಿ, ಅಶೋಕ್ ನಾಯ್ಕ್ ಅಂಡಿಗೆ, ಡಾ. ಎಚ್.ಇ. ಜ್ಞಾನೇಶ್, ಸಿ.ಪಿ. ಈರೇಶ್‍ಗೌಡ, ಯೋಗೇಶ್ ವಕೀಲ, ನಾಗರಾಜ ಗುತ್ತಿ, ವೀರೇಂದ್ರ ಪಾಟೀಲ್, ಸಂಜೀವ ಆಚಾರಿ, ಡಿ. ಶಿವಯೋಗಿ, ಬಸವರಾಜಗೌಡ ಸೇರಿದಂತೆ ಮತ್ತಿತರರು ಇದ್ದರು.