ಭೋಪಾಲ್: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿರುವ ನಡುವೆಯೇ ಮಧ್ಯಪ್ರದೇಶ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶದ ಮೇಲೆ ಹೆಚ್ಚಿನ ಕುತೂಹಲ ಮೂಡಿಸಿದೆ.
28 ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ಮಂಗಳವಾರ(ನವೆಂಬರ್ 10, 2020) ಬೆಳಗ್ಗೆ ಆರಂಭಗೊಂಡಿದ್ದು, ಆಡಳಿತಾರೂಢ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಜ್ಯೋತಿರಾಧಿತ್ಯ ಸಿಂಧ್ಯಾಗೆ ಅಗ್ನಿಪರೀಕ್ಷೆಯಾಗಿದ್ದು, ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಗೆ ಸವಾಲಿನ ಪ್ರಶ್ನೆಯಾಗಿದೆ.
19 ಜಿಲ್ಲೆಗಳ 28 ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಆರಂಭಿಕ ಮತಎಣಿಕೆಯಲ್ಲಿ 15 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಎಸ್ಪಿ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬಿಹಾರ ಚುನಾವಣೆ2020: ಎನ್ ಡಿಎ ಮೈತ್ರಿಕೂಟ ಮೇಲುಗೈ, ಸಮೀಕ್ಷೆ ಲೆಕ್ಕಾಚಾರ ತಲೆಕೆಳಗಾಗಲಿದೆಯೇ?
ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ 107 ಶಾಸಕರ ಬೆಂಬಲ ಹೊಂದಿದೆ. 229 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 115 ಶಾಸಕರ ಅಗತ್ಯವಿದೆ. 28 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 8ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಕಾಂಗ್ರೆಸ್ ಸದನದಲ್ಲಿ 87 ಶಾಸಕರ ಬಲ ಹೊಂದಿದೆ.