Advertisement
ಮೂರು ದಿನಗಳ ಹಿಂದಷ್ಟೆ ರಾಯಚೂರು ಸಂಸದ-ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಶಾಸಕ ಶರಣಗೌಡ ಕಂದಕೂರ ಅವರ ಮನೆಗೆ ಭೇಟಿ ನೀಡಿದ್ದರು. ಇದೀಗ ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಸೋಮವಾರ ಸಂಜೆ ಶಾಸಕ ಕಂದಕೂರ ಮನೆಗೆ ಭೇಟಿ ನೀಡಿ ಸುದೀರ್ಘವಾದ ಮಾತುಕತೆ ನಡೆಸಿದರು.
Related Articles
ಗುರುಮಠಕಲ್ ಕ್ಷೇತ್ರದ ಶಾಸಕರಾದ ಶರಣಗೌಡ ಕಂದಕೂರ್ ಭೇಟಿಯಿಂದ ವಿಶ್ವಾಸ ಇಮ್ಮಡಿಗೊಂಡಿದ್ದು ಜೆಡಿಎಸ್-ಬಿಜೆಪಿ ಮೈತ್ರಿಕೂಟವು ದಾಖಲೆಯ ಮತಗಳಿಂದ ಮುನ್ನಡೆ ಸಾಧಿಸಿ ಕಾಂಗ್ರೆಸ್ಸಿಗೆ ಮುಖಭಂಗ ಮಾಡಲಿದೆ ಎಂದು ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದರು.
Advertisement
ಯುಗಾದಿಯ ಮುನ್ನಾ ದಿನವಾದ ಸೋಮವಾರ ಶಾಸಕರ ಮನೆಗೆ ಖುದ್ದಾಗಿ ಭೇಟಿ ನೀಡಿ ಶುಭಾಶಯ ಕೋರಿ ಮಹತ್ವದ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಈ ಭೇಟಿ ಮೈತ್ರಿ ಕೂಟದ ವಿಶ್ವಾಸವನ್ನು ಹೆಚ್ಚಳ ಮಾಡಿದೆ. ಮಾತ್ರವಲ್ಲ ಶಾಸಕರು ತನ್ನ ಪೂರ್ಣ ಸಹಕಾರ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಂತ್ರಗಳನ್ನು ರೂಪಿಸಲು ಪಕ್ಷದ ಪ್ರಮುಖರ ಜೊತೆ ಮಂಗಳವಾರ ಸಭೆ ನಡೆಸಿ ಕಾರ್ಯ ಸೂಚಿಯನ್ನು ಕಾರ್ಯಕರ್ತರಿಗೆ ನೀಡಲಿದ್ದಾರೆ ಎಂದು ಹೇಳಿದರು.
ಜಾಧವ್ ಭೇಟಿಗೂ ಮೊದಲು, ಜೆಡಿಎಸ್ ಮುಖಂಡರ ಜತೆ ಮೀಟಿಂಗ್ಕಲಬುರಗಿ ಜಿಲ್ಲಾ ಜೆಡಿಎಸ್ ನಾಯಕರ ದಂಡು ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನೆಗೆ ಸೋಮವಾರ ಭೇಟಿ ನೀಡಿತ್ತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ, ಯುವ ನಾಯಕರಾದ ಶಿವಕುಮಾರ ನಾಟೀಕಾರ, ಕೃಷ್ಣಾರೆಡ್ಡಿ ಇತರರು ಶಾಸಕ ಕಂದಕೂರ ಜತೆ ಮೈತ್ರಿಕೂಟ ಹಾಗೂ ಲೋಕಸಭೆ ಚುನಾವಣೆ ಬಗ್ಗೆ ಸುಧೀರ್ಘ ಮಾತುಕತೆ ನಡೆಸಿದರು.