Advertisement

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

11:30 PM Jun 26, 2024 | Team Udayavani |

ಮಂಗಳೂರು: ಪ್ರಾಕೃತಿಕ ವಿಕೋಪದ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ನಿರ್ದೇಶನ ನೀಡಿದ್ದಾರೆ.

Advertisement

ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವುದಕ್ಕಾಗಿ ಹೊಸದಿಲ್ಲಿಯಲ್ಲಿರುವ ಸಂಸದರು ಘಟನೆ ಬಗ್ಗೆ ಜಿಲ್ಲಾಧಿಕಾರಿ ಜತೆಗೆ ಮಾತುಕತೆ ನಡೆಸಿ ತುರ್ತಾಗಿ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕುತ್ತಾರಿನಲ್ಲಿ ತಡೆಗೋಡೆ ಕುಸಿದು ನಾಲ್ವರು ಮೃತಪಟ್ಟ ಘಟನೆ ಅತ್ಯಂತ ದುರದೃಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಮೀನು ಗಾರರು, ನದಿ ಪಾತ್ರದ ಜನರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಜನ ಎಚ್ಚರ ವಹಿಸುವಂತೆ ಸಂಸದರು ವಿನಂತಿಸಿದ್ದಾರೆ. ಹೊಸದಿಲ್ಲಿಯಿಂದ ವಾಪಸಾದ ಕೂಡಲೇ ಮದನಿನಗರದ ದುರಂತ ಸ್ಥಳಕ್ಕೆ ಭೇಟಿ ನೀಡುವುದಾಗಿಯೂ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next