Advertisement

ಕೋವ್ಯಾಕ್ಷಿನ್ ಲಸಿಕೆ ಪಡೆದ ಜಿ.ಎಂ ಸಿದ್ದೇಶ್ವರ ದಂಪತಿ

06:32 PM Mar 03, 2021 | Team Udayavani |

ದಾವಣಗೆರೆ: ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್‌-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

Advertisement

ಅಭಿಯಾನದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ (69) ಹಾಗೂ ಅವರ ಪತ್ನಿ ಜಿ.ಎಸ್‌. ಗಾಯತ್ರಮ್ಮ ಒಳಗೊಂಡಂತೆ ಹಿರಿಯ ನಾಗರಿಕರು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ಅನಾರೋಗ್ಯ ಪೀಡಿತರು  ಸೇರಿದಂತೆ ಒಟ್ಟು 74 ಜನರು ಲಸಿಕೆ ಪಡೆದುಕೊಂಡರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪ್ರಪಂಚವನ್ನೇ ತಲ್ಲಣಗೊಳಿಸಿದ ಕೊರೊನಾ ನಿಯಂತ್ರಣಕ್ಕೆ 10 ತಿಂಗಳೊಳಗಾಗಿ ಲಸಿಕೆ ಕಂಡುಹಿಡಿದಿರುವುದು ಅಭಿನಂದನಾರ್ಹ. ಮೊದಲ ಹಂತದಲ್ಲಿ ಕೋವಿಡ್‌ ನಿಯಂತ್ರಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ನಂತರ ಕಂದಾಯ, ಪೌರಾಡಳಿತ, ಪಂಚಾಯತ್‌ ರಾಜ್‌ ಇಲಾಖೆ, ಪೊಲೀಸ್‌ ಇಲಾಖೆ ಫಲಾನುಭವಿಗಳಿಗೆ ನೀಡಲಾಗಿದೆ. ಲಸಿಕೆ ಸುರಕ್ಷಿತವಾಗಿದ್ದು, ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿಸಿದರು.

ಮಾ.1ರಂದು ಲಸಿಕೆ ಪಡೆಯಬೇಕಿತ್ತು. ಕಾರಣಾಂತರಗಳಿಂದ ಲಸಿಕೆ ಪಡೆಯಲು ಸಾಧ್ಯವಾಗಲಿಲ್ಲ. ಸ್ವ-ಇಚ್ಚೆಯಿಂದ ನನ್ನ ಮಡದಿಯೊಂದಿಗೆ ಬಂದು ಲಸಿಕೆ ಪಡೆದಿದ್ದು, ಯಾವುದೇ ತೊಂದರೆಯಾಗಿಲ್ಲ. ಸುರಕ್ಷಿತವಾಗಿದ್ದೇವೆ. ಲಸಿಕೆ ಪಡೆಯುವುದಕ್ಕು ಮುನ್ನ ಇಲ್ಲಿ ಲಸಿಕೆ ಪಡೆದ ಹಿರಿಯರನ್ನು ವಿಚಾರಿಸಿದ್ದು, ಯಾವುದೇ ರೀತಿಯ ಅಡ್ಡಪರಿಣಾಮ ಸಂಭವಿಸಿಲ್ಲ ಎಂದು ಭರವಸೆ ನೀಡಿದ್ದಾರೆ. ಲಸಿಕೆ ಪಡೆಯದ ಎಲ್ಲ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ ಎಲ್ಲಾ ಅನಾರೋಗ್ಯ ಪೀಡಿತರು ಯಾವುದೇ ಭಯವಿಲ್ಲದೆ, ಹಿಂಜರಿಯದೆ ಲಸಿಕೆ ಪಡೆದುಕೊಂಡು ದೇಶಕ್ಕೆ ಮಾದರಿಯಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಮಾತನಾಡಿ, ಸಂಸದ ಸಿದ್ದೇಶ್ವರ ಹಾಗೂ ಅವರ ಪತ್ನಿ ಲಸಿಕೆ ಹಾಕಿಸಿಕೊಂಡಿದ್ದು ಯಾವುದೇ ತೊಂದರೆಗಳು ಸಂಭವಿಸಿಲ್ಲ. ಯಾರು ಭಯ ಪಡದೇ, ಲಸಿಕೆ ಕುರಿತು ಪೂರ್ವಾಗ್ರಹ ಇಟ್ಟುಕೊಳ್ಳದೇ,ಧೈರ್ಯದಿಂದ ಮುಂದೆ ಬಂದು ಕೋವಿಶೀಲ್ಡ್‌ ವ್ಯಾಕ್ಸಿನ್‌ ತೆಗೆದುಕೊಳ್ಳಬೇಕು ಎಂದರು.

Advertisement

ನಗರಪಾಲಿಕೆ ಸದಸ್ಯ ಆರ್‌.ಎಲ್‌. ಶಿವಪ್ರಕಾಶ್‌, ಆರ್‌ಸಿಎಚ್‌ ಅಧಿಕಾರಿ ಡಾ| ಮೀನಾಕ್ಷಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next