Advertisement
ಭಾನುವಾರ ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಕೇಂದ್ರಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರ ದಿವಸ್ ಹಾಗೂ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರ ಪಾಲಿಗೆ ಅಕ್ಷಯಪಾತ್ರೆಯಂತಿರುವ ಜನೌಷಧ ಕೇಂದ್ರಗಳು ಮೋದಿ ಕಾ ದುಕಾನ್ ಎಂದೇ ದೇಶಾದ್ಯಂತ ಖ್ಯಾತಿಯನ್ನು ಪಡೆದಿವೆ ಎಂದು ತಿಳಿಸಿದರು.
Related Articles
Advertisement
ತೈಲ ಬೆಲೆ ಹಾಗೂ ಸಿಲಿಂಡರ್ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆಯಾಗಿರುವುದನ್ನು ವಿರೋಧ ಪಕ್ಷದವರು ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಆದರೆ, ಕೊರೊನಾ ಸಂಕಷ್ಟದ ಸಮಯದಲ್ಲಿ ದೇಶದ 80 ಕೋಟಿ ಜನರಿಗೆ 4-5 ತಿಂಗಳುಗಳ ಕಾಲ ಉಚಿತ ಪಡಿತರ ಹಾಗೂ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ಗಳನ್ನು ನೀಡಲು ಸಾಕಷ್ಟು ಹಣವನ್ನು ಕೇಂದ್ರ ಸರ್ಕಾರ ಖರ್ಚು ಮಾಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರ ಖಾತೆಗಳಿಗೆ ಜೀವನ ನಡೆಸಲಿಕ್ಕೆ ಅವರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಿದೆ. ಸಣ್ಣ ಸಣ್ಣ ಕೈಗಾರಿಕೆಗಳಿಗೆ ಸಬ್ಸಿಡಿ ನೀಡಿ ಕಾಯಕಲ್ಪ ನೀಡಿದೆ. ಸಾಕಷ್ಟು ಹಣ ಖರ್ಚು ಮಾಡಿರುವ ಕೇಂದ್ರ ಸರ್ಕಾರದ ಬಗ್ಗೆ ಸಾರ್ವಜನಿಕರು ಗಮನಹರಿಸಬೇಕು ಎಂದು ಮನವಿ ಮಾಡಿದರು.
ಕೊರೊನಾ ಆರ್ಥಿಕ ಸಂಕಷ್ಟದ ನಡುವೆಯೂ ನಮ್ಮ ದೇಶ ಎಲ್ಲಾ ರೀತಿಯಿಂದಲೂ ಸಮರ್ಥವಾಗಿ ಹಾಗೂ ಸದೃಢವಾಗಿ ನಿಂತಿರುವು ದಕ್ಕೆ ಕಾರಣ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಂದರು.
ಯು.ಪಿ.ಎ. ಆಡಳಿತದ ಅವ ಧಿಯಲ್ಲಿ ತೈಲಬೆಲೆ ಏರಿಕೆಯಾದಾಗ ಅದನ್ನು ಸರಿದೂಗಿಸುವ ಸಲುವಾಗಿಸುಮಾರು 1.44 ಲಕ್ಷ ಕೋಟಿಯಷ್ಟು ತೈಲ ಬಾಂಡ್ ಗಳನ್ನು ಕಂಪನಿಗಳಿಗೆ ವಿತರಿಸಲಾಗಿತ್ತು, ಅದರ ಬಡ್ಡಿ ಹಣ 70 ಸಾವಿರ ಕೋಟಿಯಷ್ಟು ಸೇರಿ ಸುಮಾರು 2 ಲಕ್ಷ ಕೋಟಿಯಷ್ಟು ಹಣವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಂಪನಿಗಳಿಗೆ ಮರುಪಾವತಿ ಮಾಡಿದೆ. ಕೇವಲ ವಿರೋಧ ಪಕ್ಷದಲ್ಲಿದ್ದೇವೆ ಎನ್ನುವ ಕಾರಣಕ್ಕೆ ಸರ್ಕಾರದ ಪ್ರತಿಯೊಂದು ನಡೆಯನ್ನೂ ಟೀಕಿಸುವುದರಲ್ಲಿ ಯಾವುದೇ ಹುರುಳಿರುವುದಿಲ್ಲ, ಸತ್ಯಾಂಶವನ್ನು ಜನರಿಗೆ ತಿಳಿಸುವ ಕೆಲಸವನ್ನು ನಾವು ಮಾಡುತ್ತೇವೆ, ನಿರ್ಧಾರ ಜನರಿಗೆ ಬಿಡುತ್ತೇವೆ ಎಂದು ತಿಳಿಸಿದರು.
ದಾವಣಗೆರೆಯ ರಾಮಕೃಷ್ಣ ಮಿಷನ್‌ನ ತೀರ್ಥಕರಾನಂದ ಸ್ವಾಮಿ, ಶಾಸಕ ಎಸ್.ಎ.ರವೀಂದ್ರನಾಥ್, ದೊಡ್ಡಬಾತಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಸಿ.ಬಿ. ಹನುಮಂತಪ್ಪ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಸಂಗನಗೌಡ್ರು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ರೇಣುಕಮ್ಮ ಕರಿಬಸಪ್ಪ ಸೇರಿದಂತೆ ಇತರರು ಇದ್ದರು.