Advertisement

ಚುನಾವಣೆಯಲ್ಲಿ ಆಯ್ಕೆಯಾದ ಮಹಿಳೆಯ ಬದಲು ಆಕೆಯ ಪತಿಯರಿಂದ ಪ್ರಮಾಣ ವಚನ ಸ್ವೀಕಾರ!

07:20 PM Aug 05, 2022 | Team Udayavani |

ಭೋಪಾಲ್‌: ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಹಿಳೆಯ ಬದಲು ಆಕೆಯ ಪತಿಯೇ ಪ್ರಮಾಣ ವಚನ ಸ್ವೀಕರಿಸಿರುವ ಘಟನೆ ಮಧ್ಯ ಪ್ರದೇಶದ ದಮೋಹ್‌ ಜಿಲ್ಲೆಯಲ್ಲಿ ನಡೆದಿದೆ.

Advertisement

ಜಿಲ್ಲೆಯ ಗೈಸಾಬಾದ್‌ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಅಧ್ಯಕ್ಷರ ಚುನಾವಣೆ ನಡೆದಿದೆ. ಅಧ್ಯಕ್ಷರ ಸ್ಥಾನ ಪರಿಶಿಷ್ಟ ವರ್ಗದವರಿಗೆ ಮೀಸಲಿದ್ದು, ಮಹಿಳಾ ಸದಸ್ಯೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಆದರೆ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರೇ ಬಂದಿರಲಿಲ್ಲ.

ಹಾಗಾಗಿ, ಅವರ ಪತಿಯೇ ಪ್ರಮಾಣ ಸ್ವೀಕರಿಸಿದ್ದಾರೆ. ಅಧ್ಯಕ್ಷರ ವಿಚಾರದಲ್ಲಿ ಹೀಗಾಗಿಲ್ಲ, ಹಲವು ಮಹಿಳಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ವಿಚಾರದಲ್ಲಿಯೂ ಅವರ ಪತಿಯರೇ ಪ್ರಮಾಣ ವಚನ ಸ್ವೀಕರಿಸಿದ್ದು, ಇದಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೂ ಅನುಮತಿ ಕೊಟ್ಟಿರುವುದಾಗಿ ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ವಿಸ್ತೃತ ವರದಿ ಕೇಳಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next