Advertisement

ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದ ಸಂಸದ ಜಾಧವ

12:25 PM Jun 13, 2022 | Team Udayavani |

ಕಲಬುರಗಿ: ಸಮಾವೇಶವೊಂದರಲ್ಲಿ ಭಾಗವಹಿಸಲು ಹೊರಟಿದ್ದಾಗ ಮಾರ್ಗ ಮಧ್ಯೆ ಶಹಾಬಾದ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದನ್ನು ಕಂಡ ಸಂಸದ ಡಾ| ಉಮೇಶ ಜಾಧವ, ಖುದ್ದು ತಮ್ಮ ಕಾರಿನಲ್ಲಿ ಮಹಿಳೆಯನ್ನು ಜಿಮ್ಸ್‌ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ ಘಟನೆ ರವಿವಾರ ನಡೆದಿದೆ.

Advertisement

ಈ ಎಲ್ಲ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಜನಪರ ಕಾರ್ಯಗಳು ಲೋಕಸಭೆಯಲ್ಲೂ ಕಾಣಿಸಲಿ ಎಂದು ಸಲಹೆ ನೀಡಿದ್ದಾರೆ.

ರವಿವಾರ ಬೆಳಗ್ಗೆ ನಾಲವಾರದಲ್ಲಿ ನಡೆಯುವ ಸಮಾವೇಶಕ್ಕೆ ಸಂಸದರು ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಶಹಾಬಾದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ರಕ್ತ ಸುರಿಯುತ್ತಿತ್ತು. ಇದನ್ನು ಗಮನಿಸಿದ ಸಂಸದರು ಕೂಡಲೇ ಕಾರಿನಿಂದ ಇಳಿದು ಮಹಿಳೆ ಸಹಾಯಕ್ಕೆ ಧಾವಿಸಿದರು. ಈ ವೇಳೆ ತಮ್ಮ ಕಾರಿನಲ್ಲೇ ಮಹಿಳೆಯನ್ನು ಕುಳ್ಳಿರಿಸಿಕೊಂಡು ನಗರ ಜಿಮ್ಸ್‌ ಆಸ್ಪತ್ರೆಗೆ ಕರೆತಂದರು. ಅಲ್ಲದೇ, ತಾವೇ ಆಪರೇಷನ್‌ ಕೊಠಡಿಯಲ್ಲಿ ನಿಂತು ಚಿಕಿತ್ಸೆ ಕೊಡಿಸಿದರಲ್ಲದೇ, ಸ್ವಯಂ ವೈದ್ಯರಾಗಿರುವ ಅವರು ಗೌನ್‌ ತೊಟ್ಟು ಚಿಕಿತ್ಸೆಗೆ ಸಹಾಯ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next