ಭೋಪಾಲ್: ರಾಮನವಮಿ ಆಚರಣೆ ವೇಳೆ ಗಲಭೆ ಎಬ್ಬಿಸಿದ ಆರೋಪದ ಮೇರೆಗೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಇದುವರೆಗೆ 175 ಆರೋಪಿಗಳನ್ನು ಬಂಧಿಸಲಾಗಿದೆ. 64 ಪುಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಖಾರ್ಗೋನ್‌ನಲ್ಲಿ ಕರ್ಫ್ಯೂವನ್ನು ಭಾನುವಾರ ಕೊಂಚ ಸಡಿಲಿಸಲಾಗಿತ್ತು. ಬೆಳಗ್ಗೆ 8ರಿಂದ ಸಂಜೆ 5ರವರೆಗೆ 9 ಗಂಟೆ ಕಾಲ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ, ಇನ್ನೆರಡು ದಿನಗಳ ವರೆಗೆ ನೈಟ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಮುಂದುವರಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹ್ಸಿನ್‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಶನಿವಾರ ಸ್ಥಳೀಯ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಪ್ರಸ್ತುತ ಆತನನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಮಹತ್ವದ ವಿಚಾರ ಬಾಯ್ಬಿಟ್ಟಿದ್ದಾನೆ ಎಂಬ ಸಂಗತಿ ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಹಲವು ಸಾಕ್ಷ್ಯಗಳು ಲಭಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗೆ ತೀವ್ರ ಶೋಧ ಮುಂದುವರಿದಿದೆ.
ಇದನ್ನೂ ಓದಿ :ಜಿನ್‌ಪಿಂಗ್ ಫೇವರಿಟ್ ಕೃತಿಗಳಲ್ಲಿ ಟ್ಯಾಗೋರರ ಗೀತಾಂಜಲಿಗೆ ಸ್ಥಾನ!