Advertisement

ಮೂಡಿಗೆರೆ ತಾಲೂಕಿಗೆ ಅತಿ ಹೆಚ್ಚು ಅನುದಾನ ಬಿಡುಗಡೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅಭಿಮತ

12:55 PM Jun 30, 2020 | mahesh |

ಮೂಡಿಗೆರೆ: ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಮೂಡಿಗೆರೆ ತಾಲೂಕಿಗೆ ಅತೀ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ
ಅಭಿಪ್ರಾಯಪಟ್ಟರು. ಸೋಮವಾರದಂದು ತಾಪಂ ಆವರಣದಲ್ಲಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಭಾಂಗಣದಲ್ಲಿ ನಡೆದ ತ್ರೆ„ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. 2018ರಿಂದ ಈಚೆಗೆ ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ ಅತೀ ಹೆಚ್ಚು ಅನುದಾನ ಬಿಡುಗಡೆಯಾಗಿದೆ.

Advertisement

ಅತಿವೃಷ್ಟಿಗೆಂದೇ ನೂರಾರು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಗಳ ಕಾರ್ಯ ಬಿರುಸಿನ ವೇಗದಲ್ಲಿಯೇ ನಡೆಯುತ್ತಿತ್ತು. ಆದರೆ ದುರದೃಷ್ಟವಶಾತ್‌ ಕೊರೊನಾ ಭೀತಿ ಎಲ್ಲಾ ಕಾರ್ಯಗಳಿಗೆ ಹಿನ್ನಡೆ ಉಂಟು ಮಾಡುತ್ತಿದೆ. ಅತಿವೃಷ್ಟಿ, ಕುಡಿಯುವ ನೀರು, ರಸ್ತೆ, ಸೇತುವೆಗಳು, ಸಣ್ಣ ನೀರಾವರಿ, ಪುನರ್ವಸತಿ ಸೇರಿದಂತೆ ಹತ್ತು ಹಲವು ಯೋಜನೆಗಳಿಗೆ ನೂರಾರು ಕೋಟಿ ಹಣ ಬಿಡುಗಡೆಯಾಗಿದೆ. ಕೆಲವು ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ. ಇನ್ನುಳಿದ ಯೋಜನೆಗಳಿಗೆ ರೂಪುರೇಷೆ ಮುಗಿದಿದ್ದು, ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಮಾತನಾಡಿ, ಅಧಿಕಾರಿಗಳು ಮಂದಗತಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು
ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸ್ಥಳೀಯವಾಗಿ ಇರುವ ಸಮಸ್ಯೆಗಳ ಮೂಲವನ್ನು ಹುಡುಕಿ ಅರ್ಥ ಮಾಡಿಕೊಂಡು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ವರದಿ ಸಲ್ಲಿಸಿ. ಕಲ್ಪನಾ ಲೋಕದಿಂದ ಹೊರ
ಬಂದು ವಾಸ್ತವತೆಯನ್ನು ಅರ್ಥಮಾಡಿಕೊಳ್ಳಿ.  ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಾ, ಪ್ರತಿನಿತ್ಯ ದಿನ ನೂಕುಲು ಕಷ್ಟ ಪಡುತ್ತಿರುವ ಅದೆಷ್ಟೋ ಕುಟುಂಬಗಳಿವೆ. ಮೊಂಡುತನ,
ಸೋಮಾರಿತನ ಬಿಟ್ಟು ಕೆಲಸ ನಿರ್ವಹಿಸಿ ಎಂದು ತಾಲೂಕು ಕಚೇರಿ ಅಧಿಕಾರಿಯೊಬ್ಬರಿಗೆ ಚಾಟಿ ಬೀಸಿದರು.

ಮೂಡಿಗೆರೆ ತಹಶೀಲ್ದಾರ್‌ ಎಚ್‌. ಎಂ.ರಮೇಶ್‌ ಅವರು ಅತಿವೃಷ್ಟಿಯಲ್ಲಿ ನಿರಾಶ್ರಿತರಾದವರಿಗೆ ಬಣಕಲ್‌ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ವಸತಿ ನಿಲಯಗಳ ಬಗ್ಗೆ ಮಾಹಿತಿ ನೀಡಿದರು. ಒಟ್ಟು 369 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಇವುಗಳಲ್ಲಿ 165 ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿದ್ದು, 18 ಪೂರ್ಣಗೊಂಡಿವೆ. 26 ಮನೆಗಳು ರೂಫ್‌ ಮಟ್ಟದಲ್ಲಿವೆ. 30 ಮನೆಗಳು ಲಿಂಟಲ್‌ ಲೆವೆಲ್‌ ನಲ್ಲಿದ್ದರೆ, 85 ಮನೆಗಳ ಅಡಿಪಾಯ ಕಾಮಗಾರಿ ಪ್ರಗತಿಯಲ್ಲಿದೆ. ಬಾಕಿ ಉಳಿದ 130 ಮನೆಗಳ ನಿರಾಶ್ರಿತರು ಬೇರೆಡೆ ಜಾಗ ಕೇಳಿರುವುದರಿಂದ ಮನೆಗಳ ನಿರ್ಮಾಣ ಕಾರ್ಯವನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಜಿ.ಪಂ. ಸದಸ್ಯರಾದ ಬಣಕಲ್‌ ಶ್ಯಾಮಣ್ಣ, ಬಿ.ಎಲ್‌.ದೇವರಾಜ್‌ ಅವರು ವಿವಿಧ ಅನುದಾನ ಬಿಡುಗಡೆ ಯಾಗದಿರುವುದು, ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿ ಗಳನ್ನು ನಿರ್ಲಕ್ಷಿಸುತ್ತಿರುವುದು, ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿ ಗಮನ ಸೆಳೆದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪ್ರಮೀಳಾ, ತಾಪಂ ಇಒ ಅಧಿಕಾರಿ ಎಂ.ವಿ.ವೆಂಕಟೇಶ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next