Advertisement

MP News; ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಪಟ್ವಾರಿಗೆ ಒಂದು ವರ್ಷ ಜೈಲು ಶಿಕ್ಷೆ

05:23 PM Jul 01, 2023 | Team Udayavani |

ಭೋಪಾಲ್: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮಧ್ಯಪ್ರದೇಶ ಕಾಂಗ್ರೆಸ್‌ಗೆ ದೊಡ್ಡ ಶಾಕ್ ಎಂಬಂತೆ 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಮಾಜಿ ಸಚಿವ ಮತ್ತು ಇಂದೋರ್‌ನ ರಾವು ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ಕಾರ್ಯಾಧ್ಯಕ್ಷ ಜಿತು ಪಟ್ವಾರಿ ಅವರನ್ನು ಸಂಸದ-ಶಾಸಕ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಪಟ್ವಾರಿ ಅವರಿಗೆ ಒಂದು ವರ್ಷ ಶಿಕ್ಷೆ ವಿಧಿಸಿ 10,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

Advertisement

ನ್ಯಾಯಾಲಯವು ಅಧಿಕೃತ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಜಿತು ಪಟ್ವಾರಿ ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಇದು 2009 ರ ವಿಷಯವಾದ್ದು, ಆಗ ಪಟ್ವಾರಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ರಾಜಗಢ ಜಿಲ್ಲೆಯಲ್ಲಿ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಅವರ ವಿರುದ್ಧ ಸರಕಾರಿ ಕೆಲಸಕ್ಕೆ ಅಡ್ಡಿ, ಸರಕಾರಿ ಆಸ್ತಿ ಹಾನಿ, ಬಂಡಾಯ ಮತ್ತಿತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಭೋಪಾಲ್‌ನ ಎಂಪಿ-ಎಂಎಲ್‌ಎ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸುವಾಗ ಪಟ್ವಾರಿ, ಶಾಸಕ ಕುನಾಲ್ ಚೌಧರಿ ಮತ್ತು ಇತರ ಬೆಂಬಲಿಗರು ಸಹ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next