Advertisement

ಹೆದ್ದಾರಿ ಕಾಮಗಾರಿ ತ್ವರಿತಕ್ಕೆ ಸಂಸದ ನಳಿನ್‌ ಕುಮಾರ್‌ ಕಟೀಲು

07:49 AM Aug 05, 2020 | mahesh |

ಮಂಗಳೂರು: ಜಿಲ್ಲೆಗೆ ಮಂಜೂರಾಗಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಸೂಚನೆ ನೀಡಿದ್ದಾರೆ.
ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಕಾರ್ಕಳ-ಮೂಡುಬಿದಿರೆ-ಮಂಗಳೂರು ರಸ್ತೆ, ಬಿ.ಸಿ.ರೋಡ್‌- ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು. ಅದೇ ರೀತಿ ಕೋವಿಡ್‌ನಿಂದಾಗಿ ಸ್ಥಗಿತಗೊಂಡಿರುವ ಇತರ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಹೇಳಿದರು.

ದಿನಕ್ಕೆ 4,000 ಪರೀಕ್ಷೆ
ಜಿಲ್ಲೆಯಲ್ಲಿ ಪ್ರತೀ ದಿನ 4,000 ಮಂದಿಯ ಕೋವಿಡ್‌ ಪರೀಕ್ಷೆ ಮಾಡಲು ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಪಟ್ಟಣ ಪ್ರದೇಶಗಳಲ್ಲಿ ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ವೆನಾÉಕ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ರೆಫ‌ರಲ್‌ ಮಾಡಿ ಆಯುಷ್ಮಾನ್‌ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದರು.

ಬಿಲ್‌ ಪರಿಶೀಲನೆಗೆ ಘಟಕ
ಕೊರೊನಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್‌ಗ‌ಳು ಸರಕಾರ ನಿಗದಿಪಡಿಸಿದ ದರದಲ್ಲಿ ಇದೆಯೋ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿ ಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಹೇಳಿದರು.

ಆನ್‌ಲೈನ್‌ ತರಗತಿಗೆ ವ್ಯವಸ್ಥೆ
ಇಂಟರ್‌ನೆಟ್‌ ಸಮಸ್ಯೆಯಿಂದ ಆನ್‌ಲೈನ್‌ ತರಗತಿಗಳಿಗೆ ತೊಂದರೆಯಾಗು ತ್ತಿರುವ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಗ್ರಾ.ಪಂ.ಗಳಲ್ಲಿನ ರಾಜೀವ್‌ ಗಾಂಧಿ ಸೇವಾ  ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಂಸದರು ಸೂಚಿಸಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಮಲ್ಲೇಸ್ವಾಮಿ ಅವರು ಇಂಟರ್‌ನೆಟ್‌ ಸಮಸ್ಯೆ ಇರುವ ಪ್ರದೇಶಗಳ ವಿದ್ಯಾರ್ಥಿಗಳ ಮನೆಗೆ ಹೋಗಿ ಪಾಠ ಮಾಡಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದರು.

Advertisement

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿ ಕಳೆದ ವರ್ಷ ನಡೆದ ತ್ಯಾಜ್ಯ ದುರಂತದ ಕಾರಣಗಳನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ರಚಿಸಲು ಸಂಸದರು ಸೂಚಿಸಿದರು. ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಂತೆ ಬಳ್ಪ ಗ್ರಾಮವು ಮೂಲಸೌಕರ್ಯಗಳ ಮೂಲಕ ಅಭಿವೃದ್ಧಿ ಹೊಂದುತ್ತಿದ್ದು ಈ ವರ್ಷಾಂತ್ಯದೊಳಗೆ ಉಳಿದಿರುವ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಸಂಸದರು ತಿಳಿಸಿದರು. ಕೊರೊನಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬಂದಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಅಭಿನಂದನೀಯ ಎಂದರು.

ಶಾಸಕರಾದ ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ ಸಿಇಒ ಡಾ| ಸೆಲ್ವಮಣಿ ಆರ್‌. ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next