Advertisement

ಹಿಜಾಬ್-ಟೋಪಿ ಹಾಕಿಕೊಂಡು ಮದರಸಗೆ ಹೋಗಿ, ಸರ್ಕಾರಿ ಶಾಲೆಗಲ್ಲ: ಪ್ರತಾಪ್ ಸಿಂಹ

09:32 AM Feb 05, 2022 | Team Udayavani |

ಮೈಸೂರು: ಎಲ್ಲಾ ರೀತಿಯ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್ ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ.  ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಕಾಲೇಜಿಗೆ ‘ಜಾಬ್’ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್’ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದರು.

ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ- ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ:ಆಧುನಿಕ ಸೂಫಿಸಂತ, ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ!

ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯರನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜಪೇಟೆಯಲ್ಲಿ ಚುನಾವಣೆ ಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ‘ಸಿದ್ದರಹೀಮ್ ಅಯ್ಯ’ ಎಂದು ಬೇಕಾದರೆ ಹೆಸರು ಬದಲಾಯಿಸಿ ಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ತಿರುಗೇಟು ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next