ಭೋಪಾಲ್ : ಮಧ್ಯಪ್ರದೇಶದಲ್ಲಿ ಸತತ 16 ಗಂಟೆಗಳ ಕಾರ್ಯಾಚರಣೆಯ ನಂತರ ಬೋರ್‌ವೆಲ್ ಗೆ ಬಿದ್ದಿದ್ದ ಮೂರು ವರ್ಷದ ಬಾಲಕ ನನ್ನ ಹೊರತೆಗೆಯಲಾಗಿದ್ದು,ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಉಮಾರಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 200 ಅಡಿ ಆಳದ ಕೊಳವೆಬಾವಿಯಲ್ಲಿ ಬಿದ್ದಿದ್ದ ಬಾಲಕನನ್ನು 16 ಗಂಟೆಗಳ ಕಾಲ ಪ್ರಯತ್ನದ ನಂತರ ಶುಕ್ರವಾರ ಹೊರತೆಗೆಯಲಾಯಿತು.
ವಾರಣಾಸಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡ ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಗುವನ್ನು ಬೋರ್‌ವೆಲ್‌ನಿಂದ ಹೊರಕ್ಕೆ ತೆಗೆದಿದೆ ಎಂದು ಸಂಸ್ಥೆಯ ಉಪ ಕಮಾಂಡೆಂಟ್ ದಿನೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹೊರತೆಗೆದ ನಂತರ, ಬಾಲಕನನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು, ಅಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಆಸ್ಪತ್ರೆಯ ವೈದ್ಯರ ಪ್ರಕಾರ, ಮಗುವನ್ನು ಬೋರ್‌ವೆಲ್‌ನಿಂದ ಹೊರತರುವ ಸುಮಾರು ಎಂಟು ಗಂಟೆಗಳ ಮೊದಲು ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದ್ದಾನೆ
ಜಿಲ್ಲಾ ಕೇಂದ್ರದಿಂದ ಸುಮಾರು 75 ಕಿಮೀ ದೂರದಲ್ಲಿರುವ ಬದರ್‌ಚಾಡ್ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನದ ಸುಮಾರಿಗೆ ಗೌರವ್ ಮುಚ್ಚಿದ ಬೋರ್‌ವೆಲ್‌ಗೆ ಜಾರಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.