ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ನನಗೆ ಮತ್ತೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವುದಿಲ್ಲ ಎನ್ನಲು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರೇನು ಬಿಜೆಪಿ ವಕ್ತಾರರೇ ಎಂದು ವಿಜಯಪುರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಹರಿಹಾಯ್ದಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಬಿ.ಪಾಟೀಲ ಅವರನ್ನು ಬಿಜೆಪಿ ಪಕ್ಷಕ್ಕೆ ಕರೆತರುವ ಆಹ್ವಾನಿಸುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲೇ ಬಹಳಷ್ಟು ನಾಯಕರಿದ್ದಾರೆ ಎಂದರು.
ಮತ್ತೆ ನಾನೇ ಸ್ಪರ್ಧಿಸಿದರೆ ಸೋಲುವುದು ಖಚಿತ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರೇ ನನಗೆ ಟಿಕೆಟ್ ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದ ಜಿಗಜಿಣಗಿ, ಇದರಲ್ಲಿ ನಮ್ಮ ಪಕ್ಷದವರೇ ಇದ್ದಾರೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.
ಇದನ್ನೂ ಓದಿ:Asia Cup 2023: ಭಾರತ- ನೇಪಾಳ ಐತಿಹಾಸಿಕ ಪಂದ್ಯ; ಭಾರತ ತಂಡದಲ್ಲಿ ಒಂದು ಬದಲಾವಣೆ
ಪಕ್ಷ ಅದಾಗಲೇ ನನಗೆ ಟಿಕೆಟ್ ನೀಡುವ ಭರವಸೆ ನೀಡಿ, ಚುನಾವಣೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದೆ. ಒಂದೊಮ್ಮೆ ಟಿಕೆಟ್ ಕೊಡದಿದ್ದರೂ ಬೇಸರವಿಲ್ಲ ಎಂದರು.
ವಿಧಾನಸಭೆ ವಿಪಕ್ಷ ನಾಯಕ ಆಯ್ಕೆ ವಿಷಯವಾಗಿ ವರಿಷ್ಠರು ನನ್ನ ಅಭಿಪ್ರಾಯ ಕೇಳಿದ್ದು, ಸೂಕ್ತ, ಅರ್ಹರನ್ನು ಆಯ್ಕೆ ಮಾಡುವಂತೆ ಹೇಳಿದ್ದೇನೆ. ಆದರೆ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದರು.