ಹೊನ್ನಾಳಿ: ಸಂತ ಸೇವಾಲಾಲರ 282ನೇ ಜಯಂತ್ಯುತ್ಸವದ ಪೂರ್ವ ತಯಾರಿಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಜಿಲ್ಲಾ ಮಟ್ಟದ ಅ ಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ಜಿಲ್ಲಾ ಮಟ್ಟದ ಅಧಿ ಕಾರಿಗಳೊಂದಿಗೆ ಭೇಟಿ ನೀಡಿದ ರೇಣುಕಾಚಾರ್ಯ, ವೇದಿಕೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿ ಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಸಂತ ಸೇವಾಲಾಲರ ಜಯಂತ್ಯುತ್ಸವಕ್ಕೆ ರಾಜ್ಯ ಮಾತ್ರವಲ್ಲ, ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಸಂತ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪಕ್ಕೆ ಮಾಲಾಧಾರಿಗಳಾಗಿ ಬರಲಿದ್ದಾರೆ. ಯಾವುದೇ ಲೋಪವಾಗದಂತೆ ಎಲ್ಲಾಗಿ ಒಟ್ಟಾಗಿ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ :ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಬಾದವಾಡಗಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವ , ಸಮಾಜಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಸಂತ ಸೇವಾಲಾಲರ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಸಾದಕ್ಕೆ ಕೌಂಟರ್ ವ್ಯವಸ್ಥೆ ಸೇರಿದಂತೆ ಕುಡಿಯುವ ನೀರು ಇತರ ಸೌಲಭ್ಯಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಿಕೊಡುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದರು.