ಬೆಂಗಳೂರು: ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗುತ್ತಾರೆ ಅನ್ನುವುದು ಸುಳ್ಳು. ಯಾರಿಗೆ ಅದೃಷ್ಟ ಇದೆಯೋ ಅವರೆಲ್ಲ ಮಂತ್ರಿ ಆಗುತ್ತಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಸಾಮರ್ಥ್ಯ ನಾಯಕತ್ವ ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ ಬಾರಿ ಜೈಲಿಗೆ ಹೋದವರು. ಯಾರೋ ಒಬ್ಬರು ಮಾತಾಡಿದರೆ ಗೌರವ ಕಡಿಮೆ ಆಗಲ್ಲ. ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಬಗ್ಗೆ ಅಪಾರ ಗೌರವ ಇದೆ. ಯಡಿಯೂರಪ್ಪ ಹೋರಾಟದ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿಯಲ್ಲಿ ಇಬ್ಬರಿದ್ದಾಗ ಯಡಿಯೂರಪ್ಪ ಯೋಚಿಸಲಿಲ್ಲ. ಈಗ 120 ಸಂಖ್ಯೆ ತಲುಪಿದೆ ಎಂದು ತಿಳಿಸಿದರು.
ಇದೇ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಯಡಿಯೂರಪ್ಪ ಕೈಕಾಲು ಹಿಡಿದು ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ಬಂದಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರಿಗೆ ಗೌರವಿಸಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೈಕಮಾಂಡ್ ಹಾಗೂ ಸಂಘ ಪರಿವಾರದವರು ಯಡಿಯೂರಪ್ಪ ಅವರನ್ನು ಶ್ಲಾಘಿಸಿದ್ದಾರೆ. ನೀವು ಜೆಡಿಎಸ್ ಹೋಗಿದ್ದರಲ್ಲಾ. ಅವತ್ತು ಹಿಂದುತ್ವ ಎಲ್ಲಿ ಹೋಗಿತ್ತು ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ :ಬಂಟ್ವಾಳ : ಡೀಸೆಲ್ ಸಾಗಾಟ ಪೈಪ್ ಲೈನ್ ನಿಂದ ಡೀಸೆಲ್ ಕಳವು ಪತ್ತೆ
ಸ್ವಾಮೀಜಿಗಳು ಸಮಾವೇಶ ಮಾಡಿರುವ ಬಗ್ಗೆ ಸಮರ್ಥಿಸಿಕೊಂಡಿರುವ ರೇಣುಕಾಚಾರ್ಯ, ಸ್ವಾಮೀಜಿಗಳು ಯಡಿಯೂರಪ್ಪ ಪರ ಸಮಾವೇಶ ಮಾಡಿಲ್ಲ. ಸ್ವಾಮೀಜಿಗಳು ಮನೆಗೆ ಬಂದಾಗ ಕಾಣಿಕೆ ನೀಡುವುದು ಸಂಸ್ಕೃತಿ. ಕಾಣಿಕೆಯಿಂದಲೇ ಸ್ವಾಮೀಜಿಗಳು ಶಾಲೆಕಾಲೇಜು ನಡೆಸುತ್ತಾರೆ. ಅವರಿಗೆ ಕಾಣಿಕೆ ನೀಡಿರುವ ಬಗ್ಗೆ ಮಾತನಾಡಿರುವುದು ಮಠಾಧೀಶರಿಗೆ ಮಾಡಿದ ಅವಮಾನ. ಯತ್ನಾಳ್ ಸ್ವಾಮೀಜಿಗಳ ಬೇಷರತ್ ಕ್ಷಮೆ ಕೇಳಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದರು.