Advertisement

Davanagere: ಬಿಎಸ್‌ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ: ರೇಣುಕಾಚಾರ್ಯ ಕಿಡಿ

02:50 PM Sep 10, 2023 | Team Udayavani |

ದಾವಣಗೆರೆ: ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಈಗ ಬಿಜೆಪಿ ಕಚೇರಿಯಲ್ಲಿ ಕುಳಿತವರಿಂದ ಒಂದು ಗ್ರಾಮ ಪಂಚಾಯಿತಿ ಚುನಾವಣೆ ಸಹ ಗೆಲ್ಲಲು ಆಗದು ಎಂದು ಹರಿಹಾಯ್ದಿದ್ದಾರೆ.

Advertisement

ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಹಿನ್ನೆಲೆಯಲ್ಲಿ ಭಾನುವಾರ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆದ ಬಳಿಕ ಈಗ ಎಲ್ಲರೂ ಯಡಿಯೂರಪ್ಪ ನಾಯಕತ್ವ ಎನ್ನುತ್ತಿದ್ದಾರೆ. ಬಿಎಸ್‌ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ. ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇ ಯಡಿಯೂರಪ್ಪ. ಆದರೆ, ಅವರನ್ನೇ ಅಧಿಕಾರದಿಂದ ಕೆಳಗಿಳಿಸಿದ್ದು ಅದರ ಪರಿಣಾಮ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ದೇಶಕ್ಕೆ ಮೋದಿ ಹೇಗೋ ಹಾಗೇ ರಾಜ್ಯಕ್ಕೆ ಯಡಿಯೂರಪ್ಪ. ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದ ಮಹಾನ್ ನಾಯಕ. ವ್ಯವಸ್ಥಿತವಾಗಿ ಯಡಿಯೂರಪ್ಪ ನವರನ್ನು ಇಳಿಸುವ ಕೆಲಸ ಮಾಡಿದ್ದರು. ನಮ್ಮವರೇ ಆರೋಪ ಹೊರೆಸಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು ಎಂದು ಸ್ವಪಕ್ಷದವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ಯಡಿಯೂರಪ್ಪ, ಜಗದೀಶ ಶೆಟ್ಟರ್ ಹಾಗೂ ಈಶ್ವರಪ್ಪ ಅವರನ್ನ ಮುಗಿಸುವುದಾಗಿ ಹೇಳಲಾಗಿತ್ತು. ಈಗ ಅದೇ ರೀತಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ತಾವು ರಾಜ್ಯದಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಕಟ್ಟಿ ಬೆಳೆಸಿದ್ದು ಯಾರಿಂದಲೂ ನನ್ನನ್ನು ಏನು ಮಾಡಲೂ ಆಗಲ್ಲ ಎಂದರು. ತಾವು ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಚುನಾವಣೆ ಆಕಾಂಕ್ಷಿ. ಟಿಕೆಟ್ ಬಗ್ಗೆ ಕಾದು ನೋಡುತ್ತೇನೆ. ಟಿಕೆಟ್ ಸಿಗದೇ ಇದ್ದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಯಾರ ವಿರುದ್ಧ ಕತ್ತಿ ಮಸಿಯೋಕೆ ಅಲ್ಲ. ಸಂಘಟನೆ ಉಳಿಯೋಕೆ ಕೆಲಸ ಮಾಡುತ್ತೇನೆ ಎಂದರು.

ನಾಳೆ ಮಾಜಿ ಶಾಸಕ ಮಾಡಾಳು ವಿರುಪಾಕ್ಷಪ್ಪರನ್ನ ಭೇಟಿ ಮಾಡುತ್ತೇನೆ ನನ್ನನ್ನು ರೆಬೆಲ್ ರೇಣುಕಾಚಾರ್ಯ ಎಂದು ಯಾರು ಬೇಕಾದರೂ ಕರೆದುಕೊಳ್ಳಲಿ. ನಾನು ಹೆದರುವುದಿಲ್ಲ. ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ. ಆದರೆ, ನಾನು ಯಾವುದಕ್ಕೂ ಹೆದರಲ್ಲ. ನೋಟೀಸ್ ಕೊಟ್ಟರೆ ಉತ್ತರ ಕೋಡುವುದಿಲ್ಲ. ಬಿಎಸ್‌ವೈ ವಿರುದ್ದ ಮಾತನಾಡಿದವರ ಮೇಲೆ ಮೊದಲು ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: India vs Pakistan: ಇಂಡೋ – ಪಾಕ್‌ ಸೂಪರ್‌ -4; ಟಾಸ್‌ ಗೆದ್ದ ಬಾಬರ್ ಪಡೆ; ಮರಳಿದ ರಾಹುಲ್

Advertisement

Udayavani is now on Telegram. Click here to join our channel and stay updated with the latest news.

Next