Advertisement
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗತ್ತು. ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತದಿಂದ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
Related Articles
Advertisement
ನಾಳೆ ಅಂತ್ಯಕ್ರಿಯೆ : ಮಂಗಳವಾರ(ಏ.30 ರಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ನಡೆಯಲಿದೆ. ಬೌಧ್ದ ಧರ್ಮದ ವಿಧಿವಿಧಾನದಂತೆ ನಡೆಯಲಿದೆ. ಅವರ ಬೌದ್ದ ಧರ್ಮ ಅನುಯಾಯಿಯಾಗಿದ್ದರು. ಇಂದು ಮಧ್ಯಾಹ್ನ 1 ಗಂಟೆ ವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಅಶೋಕ್ ಪುರಂನಲ್ಲಿ ಮೆರವಣಿಗೆ ಮಾಡಲಾಗುತ್ತದೆಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿಕ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು
ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಹೇಳಿದ್ದಾರೆ. ರಾಜಕೀಯ ಜೀವನ: ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿದ್ದ ಅವರು,
ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ ಮಾರ್ಚ್ 17 ರಂದು ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿ. ಶ್ರೀನಿವಾಸ್ ಪ್ರಸಾದ್ ಅವರು 1974ರಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವ ಮೂಲಕ ಅನಿರೀಕ್ಷಿತವಾಗಿ ರಾಜಕೀಯ ಪ್ರವೇಶ ಮಾಡಿದ್ದರು. 1978ರ ಸಾರ್ವತ್ರಿಕ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ 33ರ ಹರೆಯದಲ್ಲೇ ಸಂಸತ್ ಪ್ರವೇಶ ಮಾಡಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.