Advertisement
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು,ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ. ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದರು.
Related Articles
Advertisement
ಹಿಂದೆ ಆರ್ ಎಸ್ ಎಸ್ ನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆ ಹೊಂದಾಣಿಕೆಗೆ ಮುಂದಾಗಿದೆ. ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲ, ಅದೊಂದು ಸಾಂಸ್ಕೃತಿಕ ಸಂಘಟನೆ ಆಗಿದೆ. ಆರ್ ಎಸ್ ಎಸ್ ಬಗ್ಗೆ ಯಾಕೆ ಟೀಕೆ ಮಾಡ್ತಾರೋ ಗೊತ್ತಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ. ಕೇವಲ ನಾಲ್ಕೈದು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆಯಷ್ಟೇ. ಹೈಕಮಾಂಡ್ ಮಟ್ಟದಲ್ಲಿ ಬೆಂಬಲ ಪಡೆಯುವ ವಿಚಾರ ನಿರ್ಧಾರವಾಗಲಿದೆ ಎಂದರು.
ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.