ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹತಾಶನಾಗಿ ಸತ್ತ ಕೋಳಿಯಂತಾಗಿದ್ದಾನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದ್ದಾರೆ.
“ಬಿಜೆಪಿ-ಜೆಡಿಎಸ್ ಒಳ ಒಪ್ಪಂದದಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದೆ’ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿ ಕ್ರಿಯಿಸಿರುವ ಅವರು, ಸಿದ್ದರಾಮಯ್ಯ ನಿಮಗೆ ಈಗ ಸೋಲಿನ ಕಹಿಅರ್ಥ ಆಯ್ತ. “ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ’ ಎಂದು ನಾನು ನಂಜನಗೂಡು ಉಪ ಚುನಾವಣೆಯಲ್ಲಿ ಸೋತ ಮರು ದಿನವೇ ಹೇಳಿದ್ದೆ ಎಂದರು. ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಕಾಣಲ್ಲ ಎಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅವರು, ಸತ್ತಕೋಳಿಬೆಂಕಿಗೆಹೆದರುವಂತಾಗಿದೆ ಸಿದ್ದರಾಮಯ್ಯನ ಸದ್ಯದ ಸ್ಥಿತಿ ಎಂದು ಲೇವಡಿ ಮಾಡಿದರು.
ಅಧಿಕಾರದಲ್ಲಿದ್ದಾಗ ತೋರಿದ ದರ್ಪ ದುರಹಂಕಾರವೇ ಸಿದ್ದರಾಮಯ್ಯ ಮತ್ತು ಮಹದೇವಪ್ಪನ ಈ ಪರಿಸ್ಥಿತಿಗೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ವಿರೋಧಿಸುವವರಿದ್ದಾರೆ. ಈಗಾಗಲೇ ಉಪ ಚುನಾವಣೆಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಪತನದ ಹಾದಿ ಹಿಡಿದಿದೆ ಎಂದರು. ಬಿದ್ದ ಬೆಂಕಿಯಲ್ಲಿಕೈಕಾಯಿಸಿಕೊಳ್ಳುತ್ತಾರೆ: ಜೆಡಿಎಸ್ ವಿಲೀನ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಈ ಸಂಬಂಧ ದೇವೇಗೌಡರೇ ತೀರ್ಮಾನ ಮಾಡಿದಂತಿದೆ. ದೇವೇಗೌಡರಿಗೆ ನಾನು ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಅವರು ಯಾವಾಗ ಏನು ತೀರ್ಮಾನ ಮಾಡುತ್ತಾರೆ ಎಂದು ಯಾರಿಗೂ ಗೊತ್ತಾಗಲ್ಲ. ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೇಗೌಡರ ಸ್ವಭಾವ. ಜೆಡಿಎಸ್ ಜತೆಯ ಹೊಂದಾಣಿಕೆ ವಿಚಾರದಲ್ಲಿ ಹೈಕಮಾಂಡ್‌ದೆ ಅಂತಿಮ ನಿರ್ಧಾರ. ಕೇವಲ ಎರಡು ಮೂರು ಜಿಲ್ಲೆಗೆ ಸೀಮಿತವಾಗಿರುವ ಜೆಡಿಎಸ್‌ಗೆ ಸಿಎಂ ಸ್ಥಾನ ಬಿಟ್ಟುಕೊಡೋಕೆ ಆಗುತ್ತಾ ಎಂದರು.
ಜಿಲ್ಲಾಧಿಕಾರಿ ಶರತ್ ವರ್ಗ ತಪ್ಪು ನಿರ್ಧಾರ :
ಜಿಲ್ಲಾಧಿಕಾರಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಶರತ್ ಅವರನ್ನು ಒಂದೇ ತಿಂಗಳಲ್ಲಿ ವರ್ಗ ಮಾಡಿದ್ದು, ಮುಖ್ಯಮಂತ್ರಿಗಳ ತಪ್ಪು ನಿರ್ಧಾರವಾಗಿದೆ. ರೋಹಿಣಿ ಸಿಂಧೂರಿಗೆ ಜಾಗ ತೋರಿಸಬೇಕೆಂದಿದ್ದರೆ ಬೇರೆ ಕಡೆ ಅವಕಾಶ ಕೊಡಬೇಕಿತ್ತು. ಅವಳು ದುರಹಂಕಾರಿ, ಜನಪ್ರತಿನಿಧಿಗಳಿಗೆ ಗೌರವ ಕೊಡಲ್ಲ ಅನ್ನೋ ಕಾರಣಕ್ಕೆ ನಾನ್ ಎಕ್ಸಿಕ್ಯೂಟಿವ್ ಪೋಸ್ಟ್‌ಗೆ ಹಾಕಿದ್ದು. ಈಗ ಅವಳನ್ನೇ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದುನನಗೆಸುತಾರಾಂಇಷ್ಟಆಗಲಿಲ್ಲ ಎಂದು ಕಿಡಿಕಾರಿದರು.
ಶರತ್ ಜಿಲ್ಲಾಧಿಕಾರಿಯಾಗಿ ಕಲಬುರಗಿಯಲ್ಲಿ ಒಳ್ಳೆಕೆಲಸ ಮಾಡಿದ್ದಾರೆ. ಅವರನ್ನು ಇಲ್ಲಿಗೆ ವರ್ಗಾವಣೆ ಮಾಡಿ 29 ದಿನದಲ್ಲಿ ಬೇರೆ ಕಡೆ ಹಾಕಿದ್ದು ಎಷ್ಟು ಸರಿ? ಎಂದು ಪ್ರಶ್ನಿಸಿದ ಅವರು, ಇಂತಹ ವಿಚಾರದಲ್ಲಿ ಸಿಎಂ ವಿವೇಚನೆಯಿಂದವರ್ತಿಸಬೇಕು.ಚಾಮರಾಜನಗರ ಎಸ್ಪಿಯನ್ನು ವರ್ಗಾವಣೆ ಮಾಡಿದಾಗಲೇ ನಾನು ಎಚ್ಚರಿಕೆ ನೀಡಿದ್ದೆ. ಡಿಜಿ ಪ್ರವೀಣ್ ಸೂದ್ ಜೊತೆಗೂ ಮಾತನಾಡಿದ್ದೆ ಎಂದರು.
ರಾಜ್ಯದಲ್ಲಿ ಜೆಡಿಎಸ್‌ಗೆ ಹತಾಶ ಸ್ಥಿತಿ ಇದೆ. ಬಿಜೆಪಿ ಜೊತೆ ಬರುವುದು ಜೆಡಿಎಸ್‌ಗೆ ಅನಿವಾರ್ಯ ಇದೆ. ಜೆಡಿಎಸ್ ತನ್ನ ನೆಲೆಗಳಲ್ಲೇ ಸೋಲುಕಂಡಿದೆ. ತುಮಕೂರಿನಲ್ಲಿ ಸ್ವತಃ ದೇವೇಗೌಡರೆ ಸೋತರು. ರಾಜಕೀಯ ಭವಿಷ್ಯಕ್ಕಾಗಿ ಅವರು ಬಿಜೆಪಿ ಜೊತೆ ಹೊಂದಾಣಿಕೆ ಅನಿವಾರ್ಯ.
-ವಿ.ಶ್ರೀನಿವಾಸ್ ಪ್ರಸಾದ್, ಸಂಸದ