Advertisement
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
Related Articles
Advertisement
ಇಡೀ ಭಾರತದಲ್ಲಿ ಒಳ್ಳೆಯ ಪಕ್ಷ ಅಂದರೆ ಅದು ಬಿಜೆಪಿ. ಅದಕ್ಕಾಗಿ ನಾನು ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದೇನೆ. ಮದ್ದೂರು ಸ್ವಾಮಿ ಸೇರಿದಂತೆ ಹಲವರು ನನ್ನ ಜೊತೆ ಬಿಜೆಪಿಗೆ ಬಂದಿದ್ದಾರೆ ಎಂದು ಹೇಳಿದರು.
ಒಂದೂವರೆ ವರ್ಷದಿಂದ ಸಚ್ಚಿದಾನಂದನಿಗೆ ನಾವು ಗಾಳ ಹಾಕುತ್ತಿದ್ದೀವಿ. ಆದರೆ ಕೊನೆಗೂ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಯೋಗೇಶಣ್ಣ ನೀವು ನಮ್ಮ ಜಿಲ್ಲೆಯವರು ಅಲ್ಲ. ಆದರೆ ನಿಮ್ಮ ನೇತೃತ್ವದಲ್ಲಿ ಹಿಂದೆ ನಾವು ಬಿಜೆಪಿ ಸೇರಿದ್ದೇವೆ ಎಂದರು.
ಮಂಡ್ಯ ಬೇರೆ ಬೇರೆ ಭದ್ರ ಕೋಟೆಯಾಗಿತ್ತು. ಇವತ್ತು ನಮ್ಮ ಜಿಲ್ಲೆಗೆ ದೊಡ್ಡ ಶಕ್ತಿ ಬಂದಂತಾಗಿದೆ. ಮಂಡ್ಯದಲ್ಲಿ ಬಿಜೆಪಿ ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದು ಖುಷಿ ತಂದಿದೆ ಎಂದು ಹೇಳಿದರು.
ಮಂಡ್ಯದಲ್ಲಿ ಮುಂದೆ ಏಳು ಸೀಟುಗಳನ್ನ ಗೆಲ್ಲುತ್ತೇವೆ. ನಾನು ಇಡೀ ಜಿಲ್ಲೆಯಲ್ಲಿ ಸೇವಕನಾಗಿ ಕಲಸ ಮಾಡುತ್ತೇನೆ. ನಾವು ಯಾರು ಕಾಂಗ್ರೆಸ್, ಜೆಡಿಎಸ್ ಗೆ ಭಯಪಡುವ ಅವಶ್ಯಕತೆ ಇಲ್ಲ. ನೀವೆಲ್ಲರೂ ನಮ್ಮ ಜೊತೆ ಬಂದಿದ್ದು ನನಗೆ ಸಂತೋಷವಾಗಿದೆ ಎಂದರು.
ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ತರಲು ಈ ಪ್ರಯತ್ನ ಆಗಿದೆ. ಸಚ್ಚಿದಾನಂದ ಸೇರಿದಂತೆ ಹಲವರ ಸೇರ್ಪಡೆಯಿಂದ ಮಂಡ್ಯ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಹಾಗೂ ಹೊಸ ಸಂಚಲನ ಮೂಡಿಸಿದೆ ಎಂದರು.
ಮಂಡ್ಯದಲ್ಲೀಗ ಪಕ್ಷದಿಂದ ಒಬ್ಬರು ಶಾಸಕರಿದ್ದಾರೆ. ಮುುಂದೆ 7 ಶಾಸಕರು ಬಿಜೆಪಿಯಿಂದ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.