Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದರೂ ಒಬ್ಬರೇ ತನಿಖೆಗೆ ಹೋಗಿ 10 ಗಂಟೆ ವಿಚಾರಣೆ ಎದುರಿಸಿ, ಹೊರ ಬಂದಂತಹ ಉದಾಹರಣೆ ಇದೆ ಎಂದರು.
Related Articles
Advertisement
ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರ ಕಳೆದುಕೊಂಡ ಸಂದರ್ಭಗಳೆಲೆಲ್ಲಾ ದೇಶಾದ್ಯಂತ ಯಾವುದಾದರೂ ವಿಷಯದಲ್ಲಿ ಗೊಂದಲ ಸೃಷ್ಠಿಸುವ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ. ಕಾನೂನು ಗೌರವಿಸುವುದನ್ನು ಗಾಂಧಿ ಕುಟುಂಬದವರು ಮಾಡಲಿ ಎಂದರು.
ಅವರ ಮನಸ್ಸಿನಲ್ಲಿ ಕಟ್ಟಿಕೊಂಡ ಅರಮನೆಯಿಂದ ಹೊರಗಡೆ ಬಂದು, ಸಾಮಾನ್ಯ ಮನುಷ್ಯರ ಹಾಗೆ ತನಿಖೆ, ಕೋರ್ಟ್‌ಗೆ ಸಹಕರಿಸಬೇಕು. ಸತ್ಯ ಇದ್ದರೆ ತೀರ್ಪು ಅವರ ಪರ ಇರುತ್ತದೆ. ಭ್ರಷ್ಟಾಚಾರ ಮಾಡಿದ್ದರೆ ವಿರುದ್ಧ ತೀರ್ಪು ಬರುತ್ತದೆ. ಇನ್ನಾದರೂ ಇಂದಿರಾಗಾಂಧಿ ಕುಟುಂಬ ಸಾಮಾನ್ಯರಂತೆ ಬಾಳಲಿ ಎಂದು ಆಶಿಸಿದರು.
ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭ್ರಷ್ಟಾಚಾರ ಕಣ್ಣಿಗೆ ಕಾಣುವಂತೆ ಇದೆ. ಸರ್ಕಾರದ ಮೇಲೆ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, ಸಂವಿಧಾನದ ಮೇಲೆ ಗೌರವವಿದ್ದರೆ ಕಾಂಗ್ರೆಸ್ಸಿನ ನಾಯಕರು ತನಿಖೆಗೆ ಸಹಕರಿಸಬೇಕು. ಸರ್ಕಾರ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ, ಗೌರವ ಇದ್ದರೆ ತನಿಖೆಗೆ ಸರಿಯಾಗಿ ಸಹಕರಿಸಬೇಕಿತ್ತು. ತನಿಖೆ, ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುವ ಧೈರ್ಯವನ್ನು ಸೋನಿಯಾ, ರಾಹುಲ್ ತೋರಬೇಕಿತ್ತು. ಸ್ವಾತಂತ್ರ್ಯಕ್ಕಾಗಿ ಸತ್ಯಾಗ್ರಹ ಮಾಡುತ್ತಿದ್ದ ಕಾಂಗ್ರೆಸ್ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭ್ರಷ್ಟಾಚಾರದ ವಿರುದ್ಧ ತನಿಖೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ, ಇಡಿ ಅಧಿಕಾರಿಗಳ ಮೇಲೆ ಬ್ಲ್ಯಾಕ್ ಮೇಲ್ ಮಾಡಲು ಹೋರಾಟ ನಡೆಸುವ ಮಟ್ಟಕ್ಕೆ ಇಳಿದಿರುವುದು ದುರಂತ ಎಂದು ಬಣ್ಣಿಸಿದರು.