Advertisement

ಮಾಜಿ ಕೇಂದ್ರ ಸಚಿವ ವಿರೇಂದ್ರ ಕುಮಾರ್ ವಿಧಿವಶ: ಗಣ್ಯರ ಸಂತಾಪ

12:12 PM May 29, 2020 | keerthan |

ತಿರುವನಂತಪುರ: ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ, ಬರಹಗಾರ ವಿರೇಂದ್ರ ಕುಮಾರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ವಿರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಸುದ್ದಿಸಂಸ್ಥೆಗಳಾದ ಪಿಟಿಐ ಮತ್ತು ಐಎನ್ ಎಸ್ ಗಳ ಅಧ್ಯಕ್ಷರು ಮತ್ತು ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವಿರೇಂದ್ರ ಕುಮಾರ್ ಅವರು ಅನಾರೋಗ್ಯದಿಂದ ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

1968 ರಲ್ಲಿ ಸಂಯುಕ್ತ ಸೋಷಲಿಸ್ಟ್ ಪಕ್ಷದ ಮೂಲಕ ರಾಜಕೀಯಕ್ಕೆ ಪಾದರ್ಪಣೆ ಮಾಡಿದ್ದರು. 1996 ಮತ್ತು 1997 ರಲ್ಲಿ ಕೋಜಿಕ್ಕೋಡ್ ಸಂಸದರಾಗಿದ್ದ ಇವರು ಕೇಂದ್ರ ಸಚಿವ ಸ್ಥಾನ ಅಲಂಕರಿಸಿದ್ದರು. ಉತ್ತಮ ಬರಹಗಾರರಾಗಿದ್ದ ವಿರೇಂದ್ರ ಕುಮಾರ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ- ಪುರಸ್ಕಾರಗಳು ಸಂದಿವೆ.

ಗಣ್ಯರ ಸಂತಾಪ: ವಿರೇಂದ್ರ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇ ಗೌಡ, ರಾಹುಲ್ ಗಾಂಧಿ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next