Advertisement

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

08:22 PM Sep 22, 2024 | Team Udayavani |

ಮೈಸೂರು: ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಮತ್ತು ಧರ್ಮದಲ್ಲಿ ನಂಬಿಕೆ ಇಟ್ಟಿರುವವರ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಯಾವುದೇ ಆಚರಣೆ ಮಾಡಿಕೊಳ್ಳಲಿ. ಆದರೆ, ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ವಿಚಾರದಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದರು.

Advertisement

ಮಹಿಷಾ ದಸರೆಯ ಬದಲಿಗೆ ಮಹಿಷಾ ಮಂಡಲೋತ್ಸವ ಆಚರಣೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಜವಾಬ್ದಾರಿಯುತ ಪ್ರತಿನಿಧಿಗಳಾದ ನಾವು ಅಧಿಕಾರಿಗಳಿಗೆ ಬೆಟ್ಟದಲ್ಲಿ ಏನು ಪರಂಪರೆ, ಸಂಪ್ರದಾಯ ಇದೆ, ನಮ್ಮ ನಂಬಿಕೆ ಏನಿದೆ ಎಂಬುದನ್ನು ತಿಳಿಸಿದ್ದೇವೆ. ಯಾರ ಮನಸ್ಸಿಗೂ ಘಾಸಿಯಾಗದ ರೀತಿಯಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next