Advertisement
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಬಿಟಿ ನಾಗೇಶ್ ಹಾಗೂ ಜೆಡಿಎಸ್ ಪಕ್ಷದಿಂದ ಬಿಎನ್ ವಿಜಯ್‍ಕುಮಾರ್ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಕೋಟೆ ಬಿಕೆ ಚನ್ನೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ರುಕ್ಮಿಣಿಯಮ್ಮ ನಾಮಪತ್ರವನ್ನು ಸಲ್ಲಿಸಿದರು.
Related Articles
Advertisement
ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಬಹುದೆಂಬ ಲೆಕ್ಕಾಚಾರ ಉಲ್ಟಾವಾಗಿದ್ದು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತರಿಗೆ ಮತದಾನ ಮಾಡಿದ ಹಿನ್ನಲೆಯಲ್ಲಿ ಅವರ ಮತವನ್ನು ಚುನಾವಣಾಧಿಕಾರಿ ಬಿಎನ್ ಲೀಲಾವತಿ ಅವರು ತಿರಸ್ಕøತಗೊಳಿಸಿದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಲಾ 06 ಮತಗಳು ಪಡೆದಿರುವುದರಿಂದ ಚುನಾವಣಾಧಿಕಾರಿ ಲಾಟರಿ ಪ್ರಕ್ರಿಯೆ ನಡೆಸಿದರು ಅದರಲ್ಲಿ ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಜೆಡಿಎಸ್ ಕಾರ್ಯಕರ್ತರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು ನೂತನ ಅಧ್ಯಕ್ಷ ವಿಜಯ್‍ಕುಮಾರ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದ್ದು ತಮ್ಮ ಅವಧಿಯಲ್ಲಿ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಹೇಳಿ ಎಲ್ಲಾ ಹಾಲು ಉತ್ಪಾದಕರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಂಪಿಸಿಎಸ್ ನಿರ್ದೇಶಕರಾದ ಎಸಿ ಚಂದ್ರಶೇಖರ್, ಕೆಸಿ ಕೇಶವಮೂರ್ತಿ, ಸು. ನಾರಾಯಣಸ್ವಾಮಿ, ರುಕ್ಮಿಣಿಯಮ್ಮ, ಭಕ್ತರಹಳ್ಳಿ ಯುವ ಮುಖಂಡರಾದ ಛಲವಾದಿ ಆನಂದ್, ಭಕ್ತರಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್‍ಎನ್ ವೆಂಕಟೇಶ್, ಮಳ್ಳೂರು ಎಸ್‍ಎಫ್‍ಸಿಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಎಸ್ ನಾರಾಯಣಸ್ವಾಮಿ, ಜೆವಿ.ಮುನಿರಾಜು, ಮಂಜುನಾಥ್, ರಘುರಾಜ್, ಎಂಪಿಸಿಎಸ್ ಮಂಜು ರವಿಚಂದ್ರ,ಹಾಲು ಪರಿವೀಕ್ಷಕ ಅಶೋಕ ಮತ್ತಿತರರು ಉಪಸ್ಥಿತರಿದ್ದರು.