Advertisement

ಶಿಕ್ಷಕರನ್ನು ನಿಯೋಜಿಸಲು ಸಂಸದರ ಸೂಚನೆ

02:38 AM May 28, 2019 | Team Udayavani |

ಸುಳ್ಯ: ಮುಕ್ಕೂರು ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ ಕಾರಣದಿಂದ ವಿದ್ಯಾರ್ಥಿಗಳು ವರ್ಗಾವಣೆ ಪತ್ರಕ್ಕೆ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಶಾಲೆಗೆ ತತ್‌ಕ್ಷಣ ಶಿಕ್ಷಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರುಡಿಡಿಪಿಐಗೆ ಸೂಚನೆ ನೀಡಿದ್ದಾರೆ.

Advertisement

‘ಸಂಸದ ನಳಿನ್‌ ಕಲಿತ ಶಾಲಾ ಮಕ್ಕಳಿಗೆ ವರ್ಗಾವಣೆ ಶಿಕ್ಷೆ’ ಕುರಿತಂತೆ ಮೇ 27 ರಂದು ‘ಉದಯವಾಣಿ’ ವರದಿ ಪ್ರಕಟಿಸಿತ್ತು. ಈ ಬಗ್ಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಜಿ.ಪಂ. ವ್ಯಾಪ್ತಿಗೆ ಒಳಪಟ್ಟಿರುವ ಈ ಶಾಲೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಎಜಿಟಿ ಶಿಕ್ಷಕರ ನೇಮಕ

ಮಂಜೂರಾತಿ ಟಿಜಿಟಿ ದರ್ಜೆಯ ಶಿಕ್ಷಕ ಹುದ್ದೆ ಖಾಲಿ ಇರುವ ಕಾರಣ ಇಲ್ಲಿನ 7ನೇ ತರಗತಿಯಿಂದ 8ನೇ ತರಗತಿಗೆ ಉತೀರ್ಣಗೊಂಡ ವಿದ್ಯಾರ್ಥಿಗಳನ್ನು ಪೋಷಕರು ವರ್ಗಾವಣೆ ಪತ್ರ ಪಡೆದು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ಮುಂದಾಗಿದ್ದರು. ಈಗ ಶಾಲಾ ಚಟುವಟಿಕೆಗೆ ಧಕ್ಕೆ ಆಗದಂತೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ಎಜಿಟಿ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next