Advertisement

Bangladesh ಘಟನೆಗೆ ಪರ್ಯಾಯ ಪುತ್ತಿಗೆ ಶ್ರೀ ಕಳವಳ

06:23 PM Aug 12, 2024 | Team Udayavani |

ಉಡುಪಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಬಹಳ ಕಳವಳಕಾರಿಯಾಗಿವೆ. ಇದರಲ್ಲಿ ಅಂತಾರಾಷ್ಟ್ರೀಯ ಪಿತೂರಿ ಇರುವ ಸಾಧ್ಯತೆಯಿದೆ. ಈ ಸಮಸ್ಯೆಗೆ ಮೂಲ ಕಾರಣವೇನು ಎಂಬುದನ್ನು ತಿಳಿದುಕೊಳ್ಳಬೇಕು. ಜತೆಗೆ ಅದಕ್ಕೆ ಪರಿಹಾರ ಕಲ್ಪಿಸುವುದು ಮತ್ತು ವಿದೇಶಗಳಲ್ಲಿರುವ ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ದಿಟ್ಟ ನಿಲುವು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

Advertisement

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವೀಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ಬಾಂಗ್ಲಾದ ಘಟನೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವಿಶ್ವಾದ್ಯಂತ ಹಿಂದೂಗಳ ಮೇಲೆ ಆಕ್ರಮಣಕಾರಿ ದಬ್ಬಾಳಿಕೆಗಳು ನಡೆಯುತ್ತಿವೆ. ಈ ಬಗ್ಗೆ ನಾವೇನಾದರೂ ಮಾಡಲೇಬೇಕು ಎನಿಸುತ್ತಿದೆ. ಕಾಶ್ಮೀರದಲ್ಲಿ ಹಿಂದೆ ಏನು ನಡೆದಿತ್ತೋ ಅದನ್ನೇ ಈಗ ನಾವು ಬಾಂಗ್ಲಾದಲ್ಲಿ ನೋಡುತ್ತಿದ್ದೇವೆ. ಬೇರೆ ದೇಶಗಳಲ್ಲೂ ಇಂಥದ್ದೇ ಘಟನೆಗಳು ಆರಂಭವಾಗಿವೆ.

ಇದೊಂದು ಅಂತಾರಾಷ್ಟ್ರೀಯ ಪಿತೂರಿಯಾಗಿದೆ. ಇದರ ವಿರುದ್ಧ ಕೇಂದ್ರ ಸರಕಾರ ದಿಟ್ಟ ಹೆಜ್ಜೆ ಇಡಬೇಕು ಎಂದಿದ್ದಾರೆ.

ಹಿಂದೂ ದೇಶ ಹಾಗೂ ಸಂಸ್ಕೃತಿಯನ್ನು ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಎಲ್ಲ ಹಿಂದೂಗಳು ಜಾಗೃತರಾಗಬೇಕು ಮತ್ತು ಸೂಕ್ತ ಸ್ಪಂದನೆ ನೀಡಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next