Advertisement

ಮಲ್ಲಿಕಾರ್ಜುನ ಖರ್ಗೆಯವರೇ ಅಪಾಯದ ಕತ್ತಿ ನಿಮ್ಮ‌ ತಲೆ ಮೇಲಿದೆ: ಬಿಜೆಪಿ ಟ್ವೀಟ್

01:25 PM Jun 17, 2022 | Team Udayavani |

ಬೆಂಗಳೂರು: ಖರ್ಗೆ ಅವರೇ ಅಪಾಯದ ಕತ್ತಿ ನಿಮ್ಮ‌ ತಲೆ ಮೇಲಿದೆ. ತನ್ನ ಕುಟುಂಬಕ್ಕೆ ನಿಷ್ಠರಾಗಿದ್ದವರನ್ನೂ ರಾಹುಲ್ ಗಾಂಧಿ ತೇಜೋವಧೆ ಮಾಡುತ್ತಿದ್ದಾರೆ. ಸತ್ತವರ ತಲೆಗೆ ಹಗರಣ ಕಟ್ಟುವ ಹುನ್ನಾರ ನಡೆಯುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Advertisement

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಗರಣವನ್ನು ಮರಣ ಹೊಂದಿರುವ ಮೋತಿಲಾಲ್ ವೋರಾ ತಲೆಗೆ ಕಟ್ಟಲು ಷಡ್ಯಂತ್ರ ನಡೆಸಲಾಗುತ್ತಿದೆ. ನಾನು ಕೂಡಾ ರಾಹುಲ್ ಗಾಂಧಿ ಎಂದು ಬೊಬ್ಬಿರಿಯುವ ನಕಲಿ ವೀರರೇ ನಿಮಗಿದೋ ಎಚ್ಚರಿಕೆ. ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ ಎಂದು ಟೀಕಿಸಿದೆ.

ಇದನ್ನೂ ಓದಿ:ಪಿಂಕ್ ನೋಟ್ ಹಂಚಿ ಗೆದ್ದು ಜಗದೇಕ ವೀರನೆಂದು ಸಿದ್ದರಾಮಯ್ಯ ಬೀಗುತ್ತಿದ್ದಾರೆ: ಪ್ರತಾಪ್ ಸಿಂಹ

ಇಡಿ ವಿಚಾರಣೆ ಸಂದರ್ಭದಲ್ಲಿ ನ್ಯಾಶನಲ್ ಹೆರಾಲ್ಡ್ ಅವ್ಯವಹಾರವನ್ನೆಲ್ಲಾ ಮೋತಿಲಾಲ್ ವೋರಾ ತಲೆಗೆ ಕಟ್ಟಲಾಗಿದೆ ಎಂದು ಮಾಧ್ಯಮಗಳು ಸುದ್ದಿ ಮಾಡುತ್ತಿವೆ. ಹಗರಣಕ್ಕೆ ವೋರಾ ಕಾರಣ ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಪಲಾಯನವಾದ. ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ? ಕೋತಿ ತಿಂದು ಮೇಕೆ ಮೂತಿಗೆ ಒರೆಸಿದ ಕತೆಯಂತೆ ನ್ಯಾಶನಲ್ ಹಗರಣ ಸಾಗುತ್ತಿದೆ. ರಾಹುಲ್ ಗಾಂಧಿ‌ ನೇತೃತ್ವದ ಯಂಗ್ ಇಂಡಿಯಾ ಸಂಸ್ಥೆ ಮಾಡಿದ ಭ್ರಷ್ಟಾಚಾರವನ್ನು ಮರಣ ಹೊಂದಿದ ವೋರಾ ತಲೆಗೆ ಕಟ್ಟುತ್ತಿರುವುದೇಕೆ ಎಂದು ಪ್ರಶ್ನಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next