Advertisement

ಶ್ರೀ ಕ್ಷೇ.ಧ.ಗ್ರಾ. ಯೋಜನೆ: ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ

03:35 AM Jun 29, 2017 | Team Udayavani |

ಕುಂದಾಪುರ: ಕುಂದಾಪುರ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಪ್ರಗತಿ ಬಂಧು ಒಕ್ಕೂಟದ ಕಾರ್ಯನಿರ್ವಹಣೆ, ಕೇಂದ್ರ ಒಕ್ಕೂಟ, ಸ್ವಸಹಾಯ ಸಂಘಗಳ ಪರಿಕಲ್ಪನೆಗೆ ಮಾದರಿಯಾಗಿದೆ ಎಂದು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌  ಹೇಳಿದರು.

Advertisement

ಅವರು ಬುಧವಾರ ಕುಂದಾಪುರ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ  ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ (ರಿ) ಕುಂದಾಪುರ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೇಂದ್ರ ಸಮಿತಿ ಕುಂದಾಪುರ  ಜರಗಿದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರಲ್ಲಿ  ಶ್ರಮ ವಿನಿಯೋಗ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಅಪಾರವಾದ ಅನುಭವವಿದ್ದು, ಇದರಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ. ಸ್ವ ಸ್ಫೂ³ರ್ತಿಯಿಂದ ಬದುಕಿಗೆ ಪೂರಕವಾದ ವಿಷಯಗಳಲ್ಲಿನ ಇವರ ಸಾಧನೆ ಪ್ರಸಂಶನೀಯ ಎಂದರು.

ನೂತನ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದ ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಹಿಳೆಯರಲ್ಲಿ ಆತ್ಮ ವಿಶ್ವಾಸ ಮೂಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಯಲ್ಲಿ  ಗುರುತಿಸಿಕೊಳ್ಳುವಂತೆ ಮಾಡುವಲ್ಲಿ  ಪ್ರಗತಿಬಂಧು ಸ್ವಸಹಾಯ ಸಂಘಗಳ ಪಾತ್ರ ಮಹತ್ತರವಾದದು. ಕೃಷಿಯ ಬಗ್ಗೆ ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದ ಕಾಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿಪದ್ಧತಿಯನ್ನು ಪುನರುಜ್ಜàವನಗೊಳಿಸುವಲ್ಲಿ  ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಾ ಇದೆ. ಅನೇಕ ಯಾಂತ್ರಿಕೃತ ಕೃಷಿ ಪದ್ಧತಿಯನ್ನು ಅನುಷ್ಠಾನಗೊಳಿಸುವಲ್ಲಿ  ಅದು ಯಶಸ್ವಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ, ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಮೋಹನ ಸಾರಂಗ, ಕುಂದಾಪುರ ಬಿಲ್ಲವರ  ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಮಂಜು ಬಿಲ್ಲವ,  ಕೇಂದ್ರ ಸಮಿತಿಯ ನೂತನ ಅಧ್ಯಕ್ಷ ಎಚ್‌.ಎಂ.ಕೃಷ್ಣ ಪೂಜಾರಿ , ಬೈಂದೂರು ಯೋಜನಾಧಿಕಾರಿ ಶಶಿರೇಖಾ ಪಿ. ಉಪಸ್ಥಿತರಿದ್ದರು.

Advertisement

ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಸ್ವಾಗತಿಸಿದರು.  ಕುಂದಾಪುರದ ಯೋಜನಾಧಿಕಾರಿ ಮುರಳೀಧರ ಶೆಟ್ಟಿ ಅವರು ವರದಿ ಮಂಡಿಸಿದರು. ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್‌ ತಮ್ಮ ಅನಿಸಿಕೆಯನ್ನು  ಹೇಳಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಶೀಲಾ ಅವರು ಕಾರ್ಯಕ್ರಮ ನಿರ್ವಹಿಸಿದರು. ಯೋಜನಾಧಿಕಾರಿ ಶಶಿರೇಖಾ ಪಿ. ವಂದಿಸಿದರು.

ರಾಜ್ಯಾದ್ಯಂತ ಸುಮಾರು 14 ಸಾವಿರ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸಂಘಗಳಿದ್ದು,  ಅದರಲ್ಲಿ  ನೂರು ಒಕ್ಕೂಟಗಳು ಕುಂದಾಪುರ ತಾಲೂಕಿನ ಒಂದರಲ್ಲೇ ಇದೆ. ಆದ್ದರಿಂದಲೇ ಡಾ| ಹೆಗ್ಗಡೆ ಅವರಿಗೆ ಕುಂದಾಪುರ ತಾಲೂಕು ಎಂದು ವಿಶೇಷ ಆಸಕ್ತಿ.ಇಲ್ಲಿನ ಸಂಘಗಳು ವಿಶೇಷ ಆಸಕ್ತಿಯಿಂದ ಕಾರ್ಯನಿರ್ವಹಿಸುತ್ತಾ ಪ್ರಾಮಾಣಿಕ ಕೆಲಸವನ್ನು ಮಾಡುತ್ತಾ ಬಂದಿದೆ. ಒಕ್ಕೂಟದಲ್ಲಿ ಯಾವುದೇ ಅವ್ಯವಹಾರದ ಕೆಲಸವನ್ನು ಮಾಡದೇ ತಾಲೂಕಿನಲ್ಲಿ ಒಂದು ತರದಲ್ಲಿ ಕಾವಲು ಕೆಲಸವನ್ನು ಮಾಡುತ್ತಿರುವುದು ಪ್ರಸಂಶನೀಯವಾಗಿದೆ.

ಡಾ| ಎಲ್‌.ಎಚ್‌.  ಮಂಜುನಾಥ್‌ 

Advertisement

Udayavani is now on Telegram. Click here to join our channel and stay updated with the latest news.

Next