Advertisement

Ayodhya: ಜ.22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ… ಎಂ.ಎಸ್. ಧೋನಿಗೆ ಆಹ್ವಾನ

09:37 AM Jan 16, 2024 | Team Udayavani |

ಅಯೋಧ್ಯಾ: ವಿಶ್ವಕಪ್ ವಿಜೇತ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಅಯೋಧ್ಯೆಯ ರಾಮಮಂದಿರದ ಬಹು ನಿರೀಕ್ಷಿತ “ಪ್ರಾಣ ಪ್ರತಿಷ್ಠಾ ಸಮಾರಂಭ”ಕ್ಕೆ ಆಹ್ವಾನಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕನಿಗೆ ಜನವರಿ 15 ರ ಸೋಮವಾರ ರಾಂಚಿಯಲ್ಲಿರುವ ಅವರ ನಿವಾಸದಲ್ಲಿ ಆಹ್ವಾನವನ್ನು ನೀಡಲಾಯಿತು.

Advertisement

ಎಂಎಸ್ ಧೋನಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಅವರು ಆಹ್ವಾನ ನೀಡಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರತಿಷ್ಠಾಪನೆಗೆ ಮಾಜಿ ಕ್ರಿಕೆಟಿಗನನ್ನು ಔಪಚಾರಿಕವಾಗಿ ಆಹ್ವಾನಿಸಿದಾಗ ಬಿಜೆಪಿಯ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಸಹ ಉಪಸ್ಥಿತರಿದ್ದರು.

ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರ ನಂತರ ಎಂಎಸ್ ಧೋನಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟ ಇತ್ತೀಚಿನ ಕ್ರಿಕೆಟಿಗರಾಗಿದ್ದಾರೆ. ಜನವರಿ 13 ರಂದು ಸಚಿನ್ ತೆಂಡೂಲ್ಕರ್ ಅವರು ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಆಹ್ವಾನವನ್ನು ಸ್ವೀಕರಿಸಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ 6000 ಕ್ಕೂ ಹೆಚ್ಚು ಜನರಿಗೆ ಆಮಂತ್ರಣಗಳನ್ನು ನೀಡಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಸಮಾರಂಭದಲ್ಲಿ ಜೀವನದ ವಿವಿಧ ಕ್ಷೇತ್ರಗಳ ಹಲವಾರು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದಿನಿಂದ ವಿಧಿವಿಧಾನಗಳು ಆರಂಭ:
ಇಂದಿನಿಂದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳು ಆರಂಭವಾಗಲಿವೆ. ಈ ಅದ್ಧೂರಿ ಸಮಾರಂಭಕ್ಕೆ ಇಡೀ ನಗರವೇ ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ. ಜನವರಿ 22 ರಂದು ಮಧ್ಯಾಹ್ನ 12:30 ರಿಂದ 1 ಗಂಟೆಯವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಸಮಾರಂಭದಲ್ಲಿ 150 ದೇಶಗಳ ರಾಮಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಜನವರಿ 21 ಮತ್ತು ಜನವರಿ 22 ರಂದು ಭಕ್ತರಿಗೆ ದೇವಾಲಯಡಾ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಪ್ರಾಣ ಪ್ರತಿಷ್ಠೆಯ ನಂತರ, ಈ ದೇವಾಲಯವನ್ನು ಜನವರಿ 23 ರಂದು ರಾಮಲಾಲಾ ದರ್ಶನಕ್ಕಾಗಿ ತೆರೆಯಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: Gaza: ಬಾಂಬ್ ದಾಳಿಯಲ್ಲಿ ಇಬ್ಬರು ಇಸ್ರೇಲಿ ಒತ್ತೆಯಾಳುಗಳ ಸಾವು… ವಿಡಿಯೋ ಬಿಡುಗಡೆ

Advertisement
Advertisement

Udayavani is now on Telegram. Click here to join our channel and stay updated with the latest news.

Next