Advertisement

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

01:44 PM May 31, 2023 | Team Udayavani |

ಮುಂಬೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ  ಮುಂಬೈನ ಕೋಲ್ಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023 ರ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಐದು ವಿಕೆಟ್‌ಗಳಿಂದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಎನಿಸಿಕೊಂಡಿತ್ತು. ಇದೀಗ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ಧೋನಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ದಾಖಲಾಗುವ ಸಾಧ್ಯತೆಗಳಿವೆ ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.

ಐಪಿಎಲ್ ನ ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು.

ಚೆನ್ನೈ ಕೋಚ್ ಸ್ಟೀಫನ್ ಫ್ಲೆಮಿಂಗ್ ಕೂಡ ಧೋನಿಯ ಗಾಯದ ಬಗ್ಗೆ ಹೇಳಿಕೆಯನ್ನು ನೀಡಿದ್ದರು. “ಅವರಿಗೆ ಮೊಣಕಾಲು ಗಾಯವಾಗಿದೆ.  ಧೋನಿ ನಡೆಯುವ ಸಂದರ್ಭದಲ್ಲಿ ಗಮನಿಸಬಹುದು. ಆದರೆ ಗಾಯವು ತುಂಬಾ ಗಂಭೀರವಾಗಿಲ್ಲ. ಶೀಘ್ರವೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ” ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next