ಮುಂಬಯಿ: ಈ ಐಪಿಎಲ್ ಋತುವಿನ ಕಳಪೆ ಆರಂಭದ ನಂತರ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿರುದಾಗಿ ಚೆನ್ನೈ ಸೂಪರ್ ಕಿಂಗ್ಸ್ ಘೋಷಿಸಿದೆ. ವೈಫಲ್ಯ ಕಂಡಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ.
ಧೋನಿ ಅವರು ಸೀಸನ್ ಪ್ರಾರಂಭವಾಗುವ ಮೊದಲು ನಾಯಕತ್ವ ಬಿಟ್ಟುಕೊಟ್ಟಿದ್ದರು. ಉಳಿದ ಪಂದ್ಯಗಳಲ್ಲಿ ನಾಯಕನಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ.
“ರವೀಂದ್ರ ಜಡೇಜಾ ಅವರು ತಮ್ಮ ಆಟದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದ್ದಾರೆ ಮತ್ತು ಧೋನಿ ಅವರಿಗೆ ತಂಡವನ್ನು ಮುನ್ನಡೆಸಲು ವಿನಂತಿಸಿದ್ದಾರೆ. ಎಂಎಸ್ ಧೋನಿ ಅವರು ಹೆಚ್ಚಿನ ಆಸಕ್ತಿಯಿಂದ ಸಿಎಸ್ಕೆಯನ್ನು ಮುನ್ನಡೆಸಲು ಒಪ್ಪಿಕೊಂಡಿದ್ದಾರೆ ಮತ್ತು ಜಡೇಜಾ ಅವರ ಆಟದ ಮೇಲೆ ಕೇಂದ್ರೀಕರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ, ”ಎಂದು ಸಿಎಸ್ಕೆ ಶನಿವಾರ ಘೋಷಿಸಿದೆ.
ಇದನ್ನೂ ಓದಿ : ಆರ್ ಸಿಬಿಗೆ ಮತ್ತೆ ಸೋಲು : ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್
Related Articles
ಚೆನ್ನೈ ಪ್ರಸ್ತುತ 8 ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ. ಭಾನುವಾರ ಧೋನಿ ನಾಯಕತ್ವದಲ್ಲಿ ಸನ್ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ.