Advertisement

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

12:07 PM Nov 03, 2015 | mahesh |

ದುಬಾೖ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಹೀನಾಯವಾಗಿ ಸೋತ ಬೆನ್ನಲ್ಲೇ ಯುವ ಕ್ರಿಕೆಟಿಗರ ಬಗ್ಗೆ ಕಮೆಂಟ್‌ ಮಾಡಿದ ಚೆನ್ನೈ ತಂಡದ ನಾಯಕ ಎಂ. ಎಸ್‌ ಧೋನಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದಾರೆ.

Advertisement

ಸೋಮವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಪಂದ್ಯದಲ್ಲಿ ಚೆನ್ನೈ ತಂಡವು ರಾಜಸ್ಥಾನ್‌ ವಿರುದ್ಧ 7 ವಿಕೆಟ್‌ಗಳ ಅಂತರದಲ್ಲಿ ಸೋಲು ಕಂಡಿದ್ದು, ಟೂರ್ನಿಯಿಂದಲೇ ಹೊರಬೀಳುವ ಆತಂಕ ಎದುರಿಸುತ್ತಿದೆ. ಇದರ ನಡುವೆ ಪಂದ್ಯ ಮುಗಿದ ಬಳಿಕ ಮಾತನಾಡಿದ ಧೋನಿ, ಈ ಸೀಸನ್‌ನಲ್ಲಿ ಕೆಲ ಯುವ ಕ್ರಿಕೆಟಿಗರಲ್ಲಿ ನಾವು ತುಡಿತ ಕಾಣಲಿಲ್ಲ. ಅವರ ಆಟದಲ್ಲಿ ಯಾವುದೇ ಸ್ಪಾರ್ಕ್‌ ಇರಲಿಲ್ಲ. ಮುಂದಿನ ಪಂದ್ಯಗಳಲ್ಲಿ ಅವರನ್ನು ಕರೆತರುವುದರಿಂದ ಯಾವುದೇ ಒತ್ತಡವಿಲ್ಲದೇ ಆಡಬಹುದು ಎಂದು ವ್ಯಂಗ್ಯವಾಡಿದ್ದರು.

ಧೋನಿ ಹೇಳಿಕೆ ಬೆನ್ನಲ್ಲೇ ಅಭಿಮಾನಿಗಳು ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದು, ಧೋನಿ ಅವರ ಹೇಳಿಕೆಯಿಂದ ನಿಜಕ್ಕೂ ಬೇಸರವಾಗಿದೆ. ಯುವಕರಿಗೆ ಅವಕಾಶವನ್ನು ನೀಡದೆ ಅವರಲ್ಲಿ ಯಾವುದೇ ತುಡಿತವಿಲ್ಲ ಎನ್ನುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನಿಸಿದ್ದಾರೆ. ಜಡೇಜ, ಜಾಧವ್‌ ಈ ಸೀಸನ್‌ನಲ್ಲಿ ನಿರಂತರ ವೈಫ‌ಲ್ಯ ಅನುಭವಿಸುತ್ತಿದ್ದಾರೆ. ಆದರೆ ಅವರಿಗೆ ಮತ್ತೆ ಮತ್ತೆ ಅವಕಾಶ ನೀಡಲಾಗುತ್ತಿದೆ. ಇಂತಹವರನ್ನು ಪಕ್ಕಕ್ಕೆ ಇಟ್ಟು ಯುವಕರಿಗೆ ಅವಕಾಶ ಕೊಟ್ಟು ನೋಡಿ. ಆಬಳಿಕ ಯುವಕರಲ್ಲಿ ಸ್ಪಾರ್ಕ್‌ ಇದೆಯೋ? ಇಲ್ಲವೋ ನೋಡಿ ಎಂದು ಅಭಿಮಾನಿಗಳು ಧೋನಿ ವಿರುದ್ಧ ಕಿಡಿಕಾರಿದ್ದಾರೆ.

“ಆಯ್ಕೆ ಪ್ರಕ್ರಿಯೆಯೇ ತಪ್ಪಾಗಿದೆ’
ಟೀಮ್‌ ಇಂಡಿಯಾದ ಮಾಜಿ ಆಟಗಾರ ಕೆ. ಶ್ರೀಕಾಂತ್‌ ಅವರು ಕೂಡ ಧೋನಿ ಹೇಳಿಕೆಗೆ ತಿರುಗೇಟು ನೀಡಿದ್ದು ಧೋನಿ ಓರ್ವ ಅತ್ಯುತ್ತಮ ಕ್ರಿಕೆಟಿಗ ಎಂಬುದರಲ್ಲಿ ಸಂಶಯವೇ ಇಲ್ಲ. ಆದರೆ ರಾಜಸ್ಥಾನ್‌ ರಾಯಲ್ಸ್ ವಿರುದ್ಧ ಸೋತ ಬಳಿಕ ಅವರು ಆಡಿದ ಮಾತುಗಳನ್ನು ಒಪ್ಪಲಾಗದು. ನೀವು ಪ್ರಕ್ರಿಯೆಯ ಬಗ್ಗೆ ಮಾತನಾಡುತ್ತಿದ್ದೀರಿ ಆದರೆ ನಿಮ್ಮ ಆಯ್ಕೆಯ ಪ್ರಕ್ರಿಯೆಯೇ ತಪ್ಪಾಗಿದೆ ಎಂದು ಧೋನಿಯನ್ನು ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next