ಹೊಸದಿಲ್ಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್‌ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ ವೈದ್ಯಕೀಯ ಸಮಿತಿಯಲ್ಲಿರುವ ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ| ದಿನ್‌ಶಾ ಪರ್ದಿವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಪರ್ದಿವಾಲಾ ಅವರು ಇತ್ತೀಚೆಗೆ ರಿಷಬ್ ಪಂತ್ ಸಹಿತ ಪ್ರಮುಖ ಕ್ರಿಕೆಟಿಗರಿಗೆ ಶಸ್ತ್ರಚಿಕಿತ್ಸೆ ಮಾಡಿದ ಅನುಭವ ಹೊಂದಿದ್ದಾರೆ.
“ಹೌದು, ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಧೋನಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಇದೀಗ ಅವರು ಆರೋಗ್ಯವಾಗಿದ್ದಾರೆ ಮತ್ತು 2 ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ.