ಕೊಲ್ಲೂರು : ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ (ರಿ.) ಚಿತ್ತೂರು ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಶಾಲಾ ಚೀಲಗಳನ್ನು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಮಂಜ ವಿತರಿಸಿ ಮಾತನಾಡಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹು ಮುಖ್ಯವಾದುದು. ಮಕ್ಕಳಿಗೆ ಆಸ್ತಿ ಮಾಡಿಯಿಡುವುದಕ್ಕಿಂತ ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಒಳ್ಳೆಯ ಶಿಕ್ಷಣ ನೀಡಿ. ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸಿ ಸತøಜೆಗಳನ್ನಾಗಿ ರೂಪಿಸಿ. ಹಾಗೆಯೇ ವಿದ್ಯಾÂಸಂಸ್ಥೆಯ ಬಗ್ಗೆಯೂ ಅಭಿಮಾನ ಹೊಂದಿ ಶಾಲಾಭಿವೃದ್ಧಿಯಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಿ ಎಂದು ಅವರು ಹೇಳಿದರು.
ವಂಡ್ಸೆ ಶಾಲೆಗೆ ಆಂಗ್ಲ ಮಾಧ್ಯಮಕ್ಕೆ ಸರಕಾರದಿಂದ ಅಧಿಕೃತ ಮಾನ್ಯತೆ ದೊರಕಿದೆ. ಶಿಕ್ಷಣ ಸಂಸ್ಥೆಗಳಿಗೆ ಪೋಷಕರು, ಅಧ್ಯಾಪಕರು, ಗಣ್ಯರು, ದಾನಿಗಳು ನಾಲ್ಕು ಸ್ತಂಭಗಳಿದ್ದಂತೆ. ಅದರ ಮಹತ್ವವನ್ನು ನಾವೆಲ್ಲಾ ತಿಳಿದುಕೊಳ್ಳಬೇಕು. ಕರ್ನಾಟಕಕ್ಕೆ ಮಾದರಿಯಾಗುವಂತೆ ಈ ಟ್ರಸ್ಟ್, ಶಾಲೆ ಮೂಡಿ ಬರಬೇಕು ಎನ್ನುವುದು ನನ್ನ ಮಹತ್ವಾಕಾಂಕ್ಷೆ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಮಾತನಾಡಿ, ನಮ್ಮ ಶಾಲೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಆಂಗ್ಲ ಮಾಧ್ಯಮ ಆರಂಭವಾದರೂ ಈ ಬಾರಿ ಸರ್ಕಾರ ಮಾನ್ಯತೆ ಲಭಿಸಿದೆ. ಸರಕಾರದ ಮಾನ್ಯತೆ ಪಡೆದ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಇದೂ ಒಂದಾಗಿದೆ. ಆಂಗ್ಲ ಮಾಧ್ಯಮ ಮಾನ್ಯತೆ ಲಭಿಸಲು ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟರ ಪಾತ್ರ ಮಹತ್ವದ್ದಾಗಿದೆ. ಹಾಗೆಯೇ ಕೃಷ್ಣಮೂರ್ತಿ ಮಂಜರು 3.5 ಲಕ್ಷ ರೂ. ಅಧಿಕ ಮೌಲ್ಯದ ಸಮವಸ್ತ್ರ, ನೋಟ್ ಪುಸ್ತಕ, ಶಾಲಾ ಚೀಲ ನೀಡುತ್ತಿದ್ದಾರೆ. ಮುಂದೆ ಇನ್ನಷ್ಟು ಶೆ„ಕ್ಷಣಿಕ ಸವಲತ್ತುಗಳನ್ನು ನೀಡುತ್ತಾ ಶಾಲೆಯನ್ನು ಮಾದರಿಯನ್ನಾಗಿ ರೂಪಿಸೋಣ ಎಂದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ಗಾಣಿಗ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟ್‌ನ ಕೋಶಾಧಿಕಾರಿ ಜಿ. ಶ್ರೀಧರ್ ಶೆಟ್ಟಿ, ಸದಸ್ಯ ಸೀತಾರಾಮ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಗ್ರಾ.ಪಂ. ಸದಸ್ಯ ಉದಯ ನಾಯ್ಕ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಚಂದ್ರ ರಾಯಪ್ಪನಡಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಮೋಹಿನಿ ಬಾಯಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೆ„.ಶಿ.ಶಿಕ್ಷಕ ರಾಜು ಎನ್. ಕಾರ್ಯಕ್ರಮ ನಿರ್ವಹಿಸಿ, ಹಿರಿಯ ಶಿಕ್ಷಕಿ ಆಶಾ ವಂದಿಸಿದರು.
ಎಲ್ಲಾ ವಿದ್ಯಾರ್ಥಿಗಳಿಗೆ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಚಿತ್ತೂರು ವತಿಯಿಂದ ಸಮವಸ್ತ್ರ, ಕೊರಳು ಪಟ್ಟಿ, ಬೆಲ್ಟ್, ಬರೆಯುವ ಪುಸ್ತಕ, ಶಾಲಾ ಚೀಲ ವಿತರಿಸಲಾಯಿತು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.