ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಂಎಸ್ಸಿ ಭೌತಶಾಸ್ತ್ರ ವಿಭಾಗದ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಕೊನೆಗೂ ಜ. 20ರಂದು ಪ್ರಕಟಗೊಂಡಿದೆ.
Advertisement
ಪರೀಕ್ಷೆ ಬರೆದು ನಾಲ್ಕು ತಿಂಗಳು ಕಳೆದರೂ ಫಲಿತಾಂಶ ಪ್ರಕಟವಾಗದಿರುವ ಬಗ್ಗೆ ಉದಯವಾಣಿ ಪತ್ರಿಕೆ ಜ. 18ರಂದು ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ ಮಂಗಳೂರು ವಿ.ವಿ. ಫಲಿತಾಂಶ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟಿದೆ.
ಫಲಿತಾಂಶ ಬಾರದೆ ಹೊರ ಜಿಲ್ಲೆ, ರಾಜ್ಯಗಳಲ್ಲಿನ ವಿ.ವಿ., ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌ಡಿ ಅಧ್ಯಯನಕ್ಕೆ ಸೇರ್ಪಡೆಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ವಿದ್ಯಾರ್ಥಿಗಳು ಅಳಲು ವ್ಯಕ್ತಪಡಿಸಿದ್ದರು.