Advertisement
ಈ ಸಂಬಂಧ ಸಂಸದರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್ ಅಧ್ಯಕ್ಷ ಆಯುಶ್ ಗುಪ್ತಾ, ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್ ಪಿಡಿಎಫ್ ಸಮಸ್ಯೆ ಬಗ್ಗೆ ಮನವಿ ಬಂದಿದ್ದು, ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದೆ. ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ| ಚೌಟ ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಪೆಟ್ರೋಕೆಮಿಕಲ್ಸ್‌ನ ಪಿಟಿಎ ಸ್ಥಾವರವನ್ನು ಸ್ವಾಧೀನ ಪಡಿಸಿ ಕೊಂಡಿದ್ದು, ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ… ಅನ್ನು ಸ್ಥಾಪಿಸಿತ್ತು. ಆದರೆ ಮೂಲ ಗುತ್ತಿಗೆಯ ಭಾಗವಾಗಿ, ಜೆಬಿಎಫ್ ಪೆಟ್ರೋಕೆಮಿಕಲ್ಸ್‌ನ 115 ಸ್ಥಳಾಂತರಗೊಂಡ ಕುಟುಂಬಗಳಿಗೆ ಪೂರ್ಣಾವಧಿಯ ಉದ್ಯೋಗದ ಭರವಸೆ ನೀಡಿತ್ತು. ಆದರೆ ಜಿಎಂಪಿಎಲ್ ಪ್ರಾಜೆಕ್ಟ್ ಡಿಸ್‌ಪ್ಲೇಸ್ಡ್ ಫ್ಯಾಮಿಲೀಸ್ (ಪಿಡಿಎಫ್)ಗೆ ಗುತ್ತಿಗೆ ಆಧಾರಿತ ಉದ್ಯೋಗಗಳನ್ನು ಮಾತ್ರ ನೀಡಲು ಪರಿಗಣಿಸಿತ್ತು. ಇದರಿಂದ ಜೆಬಿಎಫ್‌ನ ಉದ್ಯೋಗಸ್ಥರು ಅತಂತ್ರರಾಗಿದ್ದರು.