Advertisement

ರೋಲ್ಸ್‌ ರಾಯ್ಸ್ ಕಾರಿನಲ್ಲಿ ಬಂದ ಎಂಟಿಬಿ

11:36 PM Aug 14, 2019 | Lakshmi GovindaRaj |

ಬೆಂಗಳೂರು: ಹೊಸಕೋಟೆಯ ಕಾಂಗ್ರೆಸ್‌ನ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್‌ ಬುಧವಾರ ಬೆಲೆಬಾಳುವ ರೋಲ್ಸ್‌ ರಾಯ್ಸ್ ಕಾರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಬಿಳಿ ಬಣ್ಣದ ದುಬಾರಿ ಕಾರ್‌ನಲ್ಲಿ ಆಗಮಿಸಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿ, ನನಗೆ ರೋಲ್ಸ್‌ ರಾಯ್ಸ್ ಕಾರು ಖರೀದಿಸಬೇಕೆಂಬ ಆಸೆ ಮೊದಲಿನಿಂದಲೂ ಇತ್ತು.

Advertisement

ಈಗ ಆಸೆ ಕೈಗೂಡಿದೆ ಎಂದರು. ಇದೇ ವೇಳೆ, ಬಿಜೆಪಿ ಸೇರುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ರಾಜಕೀಯ ನಿವೃತ್ತಿ ಪಡೆಯುವ ಬಗ್ಗೆ ಚಿಂತನೆ ನಡೆಸಿದ್ದೇನೆ. ಸಂಪುಟ ವಿಸ್ತರಣೆ ಹಾಗೂ ಬಿಜೆಪಿ ಸೇರುವ ಬಗ್ಗೆ ಅನರ್ಹ ಶಾಸಕರು ಯಾವುದೇ ಚರ್ಚೆ ನಡೆಸಿಲ್ಲ. ಸುಪ್ರೀಂ ಕೋರ್ಟ್‌ ಆದೇಶ ಬಂದ ಮೇಲೆ, ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next