Advertisement

2064 ಪೌರ ಕಾರ್ಮಿಕರ ನೇರ ನೇಮಕಾತಿಗೆ ಸರಕಾರದಿಂದ ಗ್ರೀನ್ ಸಿಗ್ನಲ್ : ಎಂ.ಟಿ.ಬಿ. ನಾಗರಾಜ್

06:07 PM Dec 21, 2021 | Team Udayavani |

ಬೆಳಗಾವಿ : ನಗರ ಸ್ಥಳೀಯ ಸಂಸ್ಥೆಗಳಲ್ಲಿ 2064 ಪೌರ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಜಿಲ್ಲಾಧಿಕಾರಿಗಳು ಈ ನೇಮಕಾತಿಗಳನ್ನು ಮಾಡುವರು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ತಿಳಿಸಿದ್ದಾರೆ.

Advertisement

ಬೆಳಗಾವಿಯ ಸುವರ್ಣ ಸೌಧದ ಬಳಿ ಸೇವಾ ಖಾಯಮಾತಿಗೆ ಅಗ್ರಹಿಸಿ ಧರಣಿ ನಡೆಸುತ್ತಿದ್ದ ಪೌರಾಡಳಿತ ಇಲಾಖೆಯ ಪೌರ ಕಾರ್ಮಿಕರು, ಲೋಡರ್‌ಗಳು, ವಾಟರ್‌ಮ್ಯಾನ್‌ಗಳು, ಕಸದ ಆಟೋ ಚಾಲಕರು, ಕಂಪ್ಯೂಟರ್ ಅಪರೇಟರ್‌ಗಳು, ಯು.ಜಿ.ಡಿ. ಕಾರ್ಮಿಕರು ಮತ್ತು ಕಛೇರಿ ಸಹಾಯಕರ ಅಹವಾಲನ್ನು ಆಲಿಸಿದ ನಂತರ ಸಚಿವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕೆಳಹಂತದ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಲೋಡರ್, ಕ್ಲೀನರ್ ಮತ್ತು ಗ್ಯಾಂಗ್‌ಮನ್‌ಗಳಿಗೆ ವೇತನವನ್ನು ನೇರ ಪಾವತಿ ಮೂಲಕ ನೀಡುವ ಬಗ್ಗೆ ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ : ಹಣಕಾಸು ಪರಿಸ್ಥಿತಿ ಅವಲೋಕಿಸಿ ಖಾಸಗಿ ಶಾಲೆಗಳಿಗೆ ವೇತನಾನುದಾನ : ಬಸವರಾಜ್ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next