Advertisement

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಎಂಟಿಬಿ ನಾಗರಾಜ್‌

11:53 AM Jan 04, 2022 | Team Udayavani |

ದೇವನಹಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲಾಗುವುದುಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದರು.

Advertisement

ಪಟ್ಟಣದ ಶಾಂತಿನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ನಡೆದ ಕಾರ್ಯಕಾರ ಣಿಯಲ್ಲಿ ಆದ ತೀರ್ಮಾನದಂತೆ ಬಸವರಾಜ್‌ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. 2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಬಸವರಾಜ್‌ ಬೊಮ್ಮಾಯಿ ಅವರೇ ಮುಂದುವರೆ ಯುತ್ತಾರೆ ಎಂದು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯಿಲ್ಲ ಎಂದು ಹೇಳಿದ್ದಾರೆ. ಹಿರಿಯ ಸಚಿವರನ್ನು ಬದಲಾಯಿಸುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಹೈಕಮಾಂಡ್‌ ತೀರ್ಮಾನ ಏನು ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ ಎಂದು ಹೇಳಿದರು.

ಅನುಷ್ಠಾನ: ವಿರೋಧಪಕ್ಷಗಳು ಹಾಗೂ ಆಡಳಿತ ಪಕ್ಷಗಳು ರಾಜಕೀಯ ಮಾಡಬೇಕು. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಬೇಕು. ಪಕ್ಷಾತೀತವಾಗಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಮೇಕೆದಾಟು ಪಾದಯಾತ್ರೆಯನ್ನು ಜ.9ರಿಂದ ಕಾಂಗ್ರೆಸ್ಸಿನವರು ಕೈಗೊಳ್ಳುತ್ತಿದ್ದಾರೆ. ಈಗಾಗಲೇಮೇಕೆದಾಟು ಯೋಜನೆಯ ಡಿಪಿಆರ್‌ ಆಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನುಅನುಷ್ಠಾನ ಮಾಡಬೇಕು ಎಂದು ಇದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next