ಚಿಕ್ಕಬಳ್ಳಾಪುರ: ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರಾದ ಎಂಟಿಬಿ ನಾಗರಾಜ್, ಶನಿವಾರ ಸಿಎಂ- ಡಿಸಿಎಂ ಆಗಿ ಪದಗ್ರಹಣ ಸ್ವೀಕರಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಿಗೆ ಟ್ವೀಟರ್ ಮೂಲಕ ಶುಭ ಹಾರೈಸಿದ್ದಾರೆ.
ಇತ್ತೀಚೆಗೆ ಮಾಜಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್, ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂದು ಟ್ವೀಟರ್ ಮೂಲಕ ಗಂಭೀರ ಆರೋಪ ಮಾಡಿದ್ದರು. ಆದರೆ, ಅವರದೇ ಪಕ್ಷದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಸುಧಾಕರ್ ಆರೋಪ ಅಲ್ಲಗೆಳೆದು ಸುಧಾಕರ್ ಈ ಬಗ್ಗೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡುತ್ತಾರಾ ಎಂದು ಪ್ರಶ್ನಿಸುವ ಮೂಲಕ ತಿರುಗಿ ಬಿದ್ದಿದ್ದರು.
ಈಗ ಕಾಂಗ್ರೆಸ್ ತನ್ನ ಸರ್ಕಾರ ರಚನೆ ಕಸರತ್ತು ಆರಂಭಿಸಿ ಮುಖ್ಯಮಂತ್ರಿಯಾಗಿ ಸಿದ್ದರಾಮ ಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಮಾಜಿ ಪೌರಾಡಳಿತ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಇಬ್ಬರಿಗೂ ಶುಭ ಕೋರಿದ್ದಾರೆ.