Advertisement

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

01:58 AM Nov 09, 2024 | Team Udayavani |

ಬೆಂಗಳೂರು: ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದು, ಆರೋಪಿ ಸ್ಥಾನದಲ್ಲಿ ನಿಂತಿರುವ ಅವರು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಯಾಗಿ ಮುಂದುವರಿಯುತ್ತೇನೆಂದು ಹೇಳುವ ಮೂಲಕ ಶಾಸಕರಿಗೆ ವಿಶ್ವಾಸ ತುಂಬುವ ಪ್ರಯತ್ನ ವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಅವರು ಯಾವಾಗ ರಾಜೀನಾಮೆ ಕೊಡುತ್ತಾರೆಂಬುದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಗೊತ್ತಿದೆ ಎಂದರು.

ಶಿಗ್ಗಾಂವಿಯಲ್ಲಿ ಬಿಜೆಪಿ ಗೆದ್ದಾಗಿದೆ ಎಂಬ ವಾತಾ ವರಣ ಸೃಷ್ಟಿಯಾಗಿದೆ. ಚನ್ನಪಟ್ಟಣ, ಸಂಡೂರಿನಲ್ಲಿ ಕಾಂಗ್ರೆಸ್‌ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಸಿದ್ದರಾಮಯ್ಯನವರಿದ್ದರು. ಆದರೆ ಈಗ ಚನ್ನಪಟ್ಟಣ ಕೈಜಾರಿ ಹೋಗುತ್ತಿದೆ ಎಂದು ಕಾಂಗ್ರೆಸ್‌ನವರಿಗೆ ಅರ್ಥವಾಗುತ್ತಿದೆ. ಸಂಡೂರು, ಚನ್ನಪಟ್ಟಣದಲ್ಲಿ ಬಿಜೆಪಿ ಕೈ ಮೇಲಾಗುತ್ತಿರುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಖುದ್ದು ಸಿಎಂ ಸಂಡೂರು ಕಡೆ ಗಮನ ಕೊಟ್ಟಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next