Advertisement

“MUDA’ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ: ಡಿ.ಕೆ. ಶಿವಕುಮಾರ್‌

11:14 PM Jul 12, 2024 | Team Udayavani |

ಬೆಂಗಳೂರು: “ಮುಡಾ’ ಪ್ರಕರಣದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿ¨ªಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ.ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ. ವಿಚಾರಣೆ ಆವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ಅನಂತರ ಮಾತನಾಡುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next