Advertisement
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿ.ಗೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತಿತರರ ವಿರುದ್ಧ ನೀಡಿರುವ ದೂರಿನ ಅನ್ವಯ ಇಸಿಐಆರ್ (ಪ್ರಕರಣ) ದಾಖಲಿಸಲಾಗಿದೆ. ತನಿಖೆ ಚುರುಕುಗೊಳಿಸಿರುವ ಇ.ಡಿ. ಸದ್ದಿಲ್ಲದೆ ಸಾಕ್ಷ್ಯ ಕಲೆ ಹಾಕುವಲ್ಲಿ ನಿರತ ವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಬ್ಯಾಂಕ್ ಮತ್ತಿತರ ದಾಖಲೆ ಗಳನ್ನು ಕಲೆ ಹಾಕಿ ಪರಿ ಶೀಲನೆ ನಡೆಸುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಬಹುತೇಕ ಸಾಕ್ಷ್ಯಗಳನ್ನು ಕಲೆ ಹಾಕ ಬೇಕಿದ್ದು, ಬಳಿಕ ಒಬ್ಬೊಬ್ಬರೇ ಆರೋಪಿಗಳ ವಿಚಾರಣೆ ನಡೆಸಲಿದ್ದಾರೆ. ಈ ದಾಖಲೆ ಕಲೆ ಹಾಕಿ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ತಿಂಗಳುಗಳೇ ಬೇಕಾಗುತ್ತವೆ. ಅಗತ್ಯ ಬಿದ್ದರೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ. ಅಧಿಕಾರಿಗಳಿಗೂ ಇ.ಡಿ. ಬಿಸಿ
ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾದ ಅವಧಿಯಲ್ಲಿ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಎಎಸ್, ಕೆಎಎಸ್ ದರ್ಜೆಯ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಗೂ ಇ.ಡಿ. ಬಿಸಿ ಮುಟ್ಟಿಸಲಿದೆ. ಈ ಅಧಿಕಾರಿಗಳಿಂದ ಅಕ್ರಮದ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ಇತರ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.