Advertisement
ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಇಲ್ಲ. ಅವರು ದೋಷಮುಕ್ತರಾಗಿ ಬರುತ್ತಾರೆ ಎಂದು ಸ್ಪಷ್ಟವಾಗಿ ಹೇಳಬಲ್ಲೇ ಎಂದರು. ಮಾರ್ಕ್ ಆಗಿಲ್ಲದಿರುವಾಗ ಬ್ಲಾಕ್ ಎಲ್ಲಿಂದ ಆಗುತ್ತದೆ. ತನಿಖೆ ನಡೆಯಬೇಕು. ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆಯೇ ಹೊರತು, ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರೆ ಎಂದು ಸಾಬೀತುಪಡಿಸಿಲ್ಲ ಎಂದರು.
ಹರಿಯಾಣ ಚುನಾವಣೆ ಪ್ರಚಾರ ಭಾಷಣದ ವೇಳೆ ಪ್ರಧಾನಿ ಮೋದಿ ಕರ್ನಾಟಕ ಸಿಎಂ ವಿಚಾರ ಪ್ರಸ್ತಾವಿಸಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡುವವರು ಮಾಡುತ್ತಾರೆ. ಕಾನೂನಿಗೂ ರಾಜಕಾರಣಕ್ಕೂ ವ್ಯತ್ಯಾಸವಿದೆ. ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸುವವರಿದ್ದಾರೆ. ಯಾವ ಪ್ರಕರಣದಲ್ಲಿ ಯಾವ ಯಾವ ಕೇಂದ್ರ ಸಚಿವರ ವಿರುದ್ಧ ತನಿಖೆ ನಡೆಯುತ್ತಿದೆ? ಅವರು ಅಧಿಕಾರದಲ್ಲಿ ಮುಂದುವರಿದಿಲ್ಲವೇ? ಮೊದಲು ಅವರ ರಾಜೀನಾಮೆ ತೆಗೆದುಕೊಳ್ಳಿ. ಅನಂತರ ನಮ್ಮ ಮುಖ್ಯಮಂತ್ರಿಗಳ ರಾಜೀನಾಮೆ ಬಗ್ಗೆ ಚರ್ಚೆ ಮಾಡೋಣ ಎಂದು ತಿಳಿಸಿದರು.