Advertisement

MUDA Case: ಇಂದು ಹೈಕೋರ್ಟ್‌ ಕದ ತಟ್ಟಲಿರುವ ಸಿಎಂ ಸಿದ್ದರಾಮಯ್ಯ

01:24 AM Sep 26, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ತನಿಖೆಯ ಉರುಳಿಗೆ ಸಿಕ್ಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2ನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ವಕೀಲರು ಸಿದ್ಧತೆ ಮಾಡಿಕೊಂಡಿದ್ದು, ಗುರುವಾರ ಹೈಕೋರ್ಟ್‌ ಕದ ತಟ್ಟಲಿದ್ದಾರೆ ಎನ್ನಲಾಗಿದೆ.

Advertisement

ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿ ರುವ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದೇ ವೇಳೆ ತನಿಖೆಗೆ ಅನುಮತಿ ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆಯೂ ಸಿಎಂ ಅರ್ಜಿ ಸಲ್ಲಿಸಲಿದ್ದಾರೆ ಎಂದು ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಎಂ ಪರ ವಕಾಲತ್ತು ವಹಿಸಿದ್ದ ವಕೀಲ ಶತಾಭಿಷ್‌ ಶಿವಣ್ಣ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next